More

    ಮೂರು ಮಂದಿ ಆರೋಪಿಗಳ ಬಂಧನ

    ಕೋಲಾರ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಅವರ ಹತ್ಯೆ ಪ್ರಕರಣ ಸಂಬಂಧ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಶ್ರೀನಿವಾಸನ್‌ನನ್ನು ಕೊಲೆ ಮಾಡಿ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷಿಸಾಗರ ಅರಣ್ಯ ಪ್ರದೇಶದಲ್ಲಿ ತಲೆಮರಿಸಿಕೊಂಡಿದ್ದರು, ಆರೋಪಿಗಳಾದ ವೇಣುಗೋಪಾಲ್, ಮನೀಂದ್ರ ಹಾಗೂ ಸಂತೋಷ್‌ನನ್ನು ಬಂಧಿಸಿ ಪೊಲೀಸರು ಕರೆ ತರುತ್ತಿದ್ದರು. ಆ ಸಂದರ್ಭದಲ್ಲಿ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರ ಮೇಲೆ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ.
    ಗುಂಡಿನ ದಾಳಿಯಿಂದ ವೇಣುಗೋಲಾ, ಮನೀಂದ್ರ ಕಾಲಿಗೆ ಗುಂಡಿ ಹಾರಿಸಿ, ಸಂತೋಷ್ ಎಂಬಾತನಿಗೂ ಗಾಯವಾಗಿದ್ದು ತಪ್ಪಿಸಿಕೊಳ್ಳದಂತೆ ಪೊಲೀಸರು ಎಚ್ಚರವಹಿಸಿದ್ದಾರೆ.
    ಆರೋಪಿಗಳ ಪೊಲೀಸರ ಮೇಲೆ ಹಲ್ಲೆ ಮಾಡಿದ್ದು ವೇಮಗಲ್ ಠಾಣೆ ಇನ್ ಸ್ಪೆಕ್ಟರ್ ವೆಂಕಟೇಶ್, ಸಿಬ್ಬಂದಿ ಮಂಜುನಾಥ್ ಮತ್ತು ನಾಗೇಶ್ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಆರೋಪಿಗಳು ಹಾಗೂ ಪೊಲೀಸರನ್ನು ನಗರದ ಜಿಲ್ಲಾ ಎಸ್‌ಎನ್‌ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
    ಸೋಮವಾರ ಬಾರ್ ಕಟ್ಟಡ ಕಾಮಗಾರಿ ವೀಕ್ಷಣೆಗೆ ಹೋಗಿದ್ದ ವೇಳೆ ಶ್ರೀನಿವಾಸಪುರ ಪಟ್ಟಣದ ಹೊರವಲಯದ ಹೊಗಳಗೆರೆ ಬಳಿ ಆರು ದುಷ್ಕರ್ಮಿಗಳು ಶ್ರೀನಿವಾಸನ್ (೬೨) ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು.
    ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಮೃತರಾದರು. ಕಾಂಗ್ರೆಸ್ ಮುಖಂಡರಾಗಿದ್ದ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಕೆ.ಆರ್.ರಮೇಶ್‌ಕುಮಾರ್ ಆಪ್ತರಾಗಿದ್ದರು. ಆಸ್ಪತ್ರೆಗೆ ಧಾವಿಸಿ ಬಂದ ರಮೇಶ್ ಕುಮಾರ್ ತಮ್ಮ ಆಪ್ತನನ್ನು ನೆನೆದು ಕಣ್ಣೀರಿಟ್ಟರು.
    ರಾಜಕೀಯ ವೈಷಮ್ಯ ಹಾಗೂ ಆಸ್ತಿ ವಿವಾದ ಹತ್ಯೆಗೆ ಕಾರಣ ಎನ್ನಲಾಗಿದೆ. ಆರೋಪಿಗಳ ಪತ್ತೆಗೆ ಡಿವೈಎಸ್ಪಿ ನೇತೃತ್ವದಲ್ಲಿ ಮೂರು ತಂಡ ರಚಿಸಲಾಗಿದೆ.
    ತಮ್ಮ ಆಪ್ತ, ದಲಿತ ಮುಖಂಡ ಶ್ರೀನಿವಾಸನ್ ಕೊಲೆ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಭೇಟಿ ನೀಡಿದರು. ಆ ಸಂದರ್ಭದಲ್ಲಿ ಶವಾಗಾರದ ಮುಂದೆ ದಲಿತ ಮುಖಂಡರು, ಶ್ರೀನಿವಾಸನ್ ಆಪ್ತರು ಪ್ರತಿಭಟನೆ ನಡೆಸಿ ಕೂಡಲೇ ಆರೋಪಿಗಳನ್ನು ಬಂಧಿಸಬೇಕುದು ಆಗ್ರಹಿಸಿದರು.

    ಮೂರು ಮಂದಿ ಆರೋಪಿಗಳ ಬಂಧನ

    ಆರೋಪಿಗಳನ್ನು ಕೂಡಲೇ ಬಂಧಿಸುವತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಶ್ರೀನಿವಾಸನ್ ನನಗೆ ಸಹೋದರ ಇದ್ದಂತೆ. ಕೊಲೆಗಾರರನ್ನು ಸುಮ್ಮನೇ ಬಿಡುವುದಿಲ್ಲ, ಶೀಘ್ರವಾಗಿ ಪತ್ತೆ ಹಚ್ಚಿ ಕಾನೂರು ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಜಿ.ಪರಮೇಶ್ವರ್ ಭರವಸೆ ನೀಡಿದಾಗ, ಪ್ರತಿಭಟನಾಕಾರರು ಪ್ರತಿಭಟನೆ ಕೈಬಿಟ್ಟರು.
    ಆರೋಪಿ ವೇಣುಗೋಪಾಲ್ ರಮೇಶ್ ಕುಮಾರ್ ಕಟ್ಟಾ ಅಭಿಮಾನಿಯಾಗಿದ್ದ. ಎದೆ ಮೇಲೆ ರಮೇಶ್ ಕುಮಾರ್ ಹಚ್ಚೆ ಸಹ ಹಾಕಿಸಿಕೊಂಡಿದ್ದಾನೆ. ವೇಣುಗೋಪಾಲ್ ಕೆಲ ವರ್ಷಗಳ ಹಿಂದೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ. ಕೊಲೆಯಾದ ಶ್ರೀನಿವಾಸ್, ವೇಣು ಇಬ್ಬರ ನಡುವೆ 7 ವರ್ಷಗಳಿಂದ ವೈಷಮ್ಯ, ಜಮೀನು ವಿವಾದವಿತ್ತು. ಹಳೇ ದ್ವೇಷದ ಹಿನ್ನೆಲೆ ಕೊಲೆ ಮಾಡಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts