More

    ಸುಲಿಗೆ ಪ್ರಕರಣದ ಇಬ್ಬರು ಆರೋಪಿಗಳ ಬಂಧನ

    ಸುಲಿಗೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು 44 ಸಾವಿರ ರೂ. ಮೌಲ್ಯದ 2 ಮೊಬೈಲ್ ಫೋನ್ ಹಾಗೂ 2 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ.

    ಮೇ 11 ರಂದು ಬಿ.ಎನ್. ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ದಂಪತಿಯಿಂದ, ಬೈಕ್‌ನಲ್ಲಿ ಇಬ್ಬರು ವ್ಯಕ್ತಿಗಳು ಮೊಬೈಲ್ ಮತ್ತು ನಗದು ಹಣವಿದ್ದ ಪರ್ಸನ್ನು ಕಿತ್ತುಕೊಂಡು ಹೋಗಿದ್ದರು. ಈ ಬಗ್ಗೆ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು.

    ಈ ಸಂಬಂಧ ತನಿಖೆ ಕೈಗೊಂಡ ಪೊಲೀಸರು ಮೇ 12 ರಂದು ಇಬ್ಬರು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದರು. ಆ ವೇಳೆ ಆರೋಪಿಗಳು ಕೃತ್ಯವೆಸಗಿರುವ ಜತೆಗೆ ಲಕ್ಷ್ಮೀಪುರಂ ಠಾಣಾ ವ್ಯಾಪ್ತಿಯಲ್ಲಿ ಸುಲಿಗೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts