More

    ನಟಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

    ಬೆಂಗಳೂರು: ಕನ್ನಡ ಚಿತ್ರರಂಗ ಪೋಷಕ ನಟಿ, ಕಿರುತೆರೆ ನಿರ್ದೇಶಕಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿದೆ.

    ನಟ, ನಿರ್ದೇಶಕ ವಿರೇಂದ್ರ ಶೆಟ್ಟಿ ಒಡೆತನದ ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಗೆ ನೀಡಿದ್ದ 40 ಲಕ್ಷ ರೂ. ಮೌಲ್ಯದ ಚೆಕ್​ ಬೌನ್ಸ್‌ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಮಂಗಳೂರಿನ ಜೆಎಂಎಫ್‌ಸಿ ಐದನೇ ನ್ಯಾಯಾಲಯವು ವಾರಂಟ್‌ ಹೊರಡಿಸಿದೆ. ಇದನ್ನೂ ಓದಿರಿ  ಆಂಜನೇಯ ದೇಗುಲಕ್ಕೆ ಬೆಂಕಿ ಇಟ್ಟು ವಿಕೃತಿ ಮೆರೆದ ಕಿಡಿಗೇಡಿಗಳು!

    ನಟ, ನಿರ್ದೇಶಕ ವಿರೇಂದ್ರ ಶೆಟ್ಟಿ ಒಡೆತನದ ವೀರೂ ಟಾಕೀಸ್ ಪ್ರೊಡಕ್ಷನ್ ಹೌಸ್‌ನಿಂದ ಪದ್ಮಜಾ ರಾವ್ ಅವರು ಹಂತ ಹಂತವಾಗಿ 41 ಲಕ್ಷ ಹಣವನ್ನು ಬ್ಯಾಂಕ್‌ ಖಾತೆ ಮೂಲಕ ಸಾಲ ಪಡೆದುಕೊಂಡಿದ್ದರು. ಈ ಸಾಲದ ಭದ್ರತೆಗಾಗಿ 40 ಲಕ್ಷ ರೂ. ಮೌಲ್ಯದ ಚೆಕ್‌ ಅನ್ನು ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಗೆ ಪದ್ಮಜಾ ರಾವ್​ ನೀಡಿದ್ದರು.

    ಪದ್ಮಜಾ ರಾವ್ ಸಾಲ ವಾಪಸ್​ ಕೊಡದಿದ್ದಾಗ ವೀರೂ ಟಾಕೀಸ್‌ ಸಂಸ್ಥೆಯಿಂದ ಸದ್ರಿ ಚೆಕ್‌ ಅನ್ನು ಪದ್ಮಜಾ ರಾವ್ ಖಾತೆಗೆ ಹಾಕಲಾಗಿತ್ತು. ಖಾತೆಯಲ್ಲಿ ಹಣವಿಲ್ಲದೆ ಚೆಕ್‌ ಬೌನ್ಸ್ ಆಗಿತ್ತು. ನಟಿಯು ಹಣ ವಾಪಸ್​ ಕೊಡದೆ ವಂಚಿಸಿದ ಕಾರಣಕ್ಕೆ ವೀರೂ ಟಾಕೀಸ್‌ ಸಂಸ್ಥೆಯಿಂದ ದೂರು ದಾಖಲಿಸಿತ್ತು. ಇದನ್ನೂ ಓದಿರಿ ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

    ಈ ಕೇಸ್​ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಲು ಆದೇಶಿಸಿದ್ದ ಸಮನ್ಸ್‌ ಅನ್ನು ಪದ್ಮಜಾ ರಾವ್​ ಸ್ವೀಕರಿಸದೆ ನಿರಾಕರಿಸುತ್ತಾ ಬಂದಿದ್ದರು. ಈ ಬಗ್ಗೆ ಗಮನಿಸಿದ್ದ ನ್ಯಾಯಾಲಯ, ನಟಿ ವಿರುದ್ಧ ಇಂದು(ಗುರವಾರ) ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.

    ಸದ್ಯ ವಾರಂಟ್‌ನ್ನು ಈಗಾಗಲೇ ತಲಘಟ್ಟಪುರ ಪೊಲೀಸ್‌ ಠಾಣೆಗೆ ರವಾನಿಸಲಾಗಿದ್ದು, ಪದ್ಮಜಾ ರಾವ್ ಅವರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಬೇಕಿದೆ.

    ಆಂಜನೇಯ ದೇಗುಲಕ್ಕೆ ಬೆಂಕಿ ಇಟ್ಟು ವಿಕೃತಿ ಮೆರೆದ ಕಿಡಿಗೇಡಿಗಳು!

    ಅಮಾವಾಸ್ಯೆ ರಾತ್ರಿ ತಿಮ್ಮಪ್ಪನ ಸನ್ನಿಧಿಯಲ್ಲಿ ಗುಂಡಿ ತೋಡಿದ ನಿಧಿಗಳ್ಳರು!

    ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts