More

    ದಿವ್ಯಾ ಹಾಗರಗಿ ಸೇರಿ 6 ಆರೋಪಿಗಳಿಗೆ ಅರೆಸ್ಟ್ ವಾರಂಟ್ ಜಾರಿ; ಪಿಎಸ್​​ಐ ನೇಮಕ ಅಕ್ರಮ ಪ್ರಕರಣ

    ಕಲಬುರಗಿ: ಪೊಲೀಸ್ ಸಬ್​ ಇನ್​ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ನಡೆಸಿದ ಅಕ್ರಮಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ಸೇರಿ ಆರು ಆರೋಪಿಗಳಿಗೆ ಅರೆಸ್ಟ್ ವಾರಂಟ್ ಜಾರಿಯಾಗಿದೆ.

    ಆರೋಪಿಗಳಾದ ದಿವ್ಯಾ ಹಾಗರಗಿ, ಮಂಜುನಾಥ್, ಕಾಶೀನಾಥ್, ರವೀಂದ್ರ, ಶಾಂತಿಬಾಯಿ, ಅರ್ಚನಾ ಅವರನ್ನು ಬಂಧಿಸುವಂತೆ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಕಲಬುರಗಿಯ ಮೂರನೇ ಜೆಎಂಎಫ್​ಸಿ ಕೋರ್ಟ್​ನಿಂದ ಈ ಅರೆಸ್ಟ್ ವಾರಂಟ್ ಜಾರಿಗೊಳಿಸಲಾಗಿದೆ.

    ತನಿಖಾ ಅವಧಿಯಲ್ಲಿಯೇ ಆರೋಪಿಗಳಿಗೆ ಅರೆಸ್ಟ್ ವಾರಂಟ್ ಜಾರಿಯಾಗಿರುವ ಇದು ಕರ್ನಾಟಕದಲ್ಲೇ ಅಪರೂಪದ ಪ್ರಕರಣ ಎನ್ನಲಾಗಿದೆ. ಮುಂಬೈ ಬಾಂಬ್ ಬ್ಲಾಸ್ಟ್ ಸಂದರ್ಭದಲ್ಲಿ ದಾವೂದ್ ಇಬ್ರಾಹಿಂ ಬಂಧನಕ್ಕೂ ಇಂಥದ್ದೇ ಅರೆಸ್ಟ್ ವಾರೆಂಟ್ ಜಾರಿಯಾಗಿತ್ತು. ದಾವೂದ್​ ಪ್ರಕರಣವನ್ನು ಉಲ್ಲೇಖಿಸಿ ಸಿಐಡಿ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕೋರ್ಟ್ ಈ ಅರೆಸ್ಟ್​ ವಾರಂಟ್ ಜಾರಿಗೊಳಿಸಿದ್ದು, ಒಂದು ವಾರದೊಳಗಾಗಿ ಬಂಧಿಸುವಂತೆ ಆದೇಶಿಸಿದೆ.

    ರಾಜಸ್ಥಾನ ಪೊಲೀಸರ ಮನಗೆದ್ದ ‘ಕೆಜಿಎಫ್​-2’ ‘ವಯಲೆನ್ಸ್​’!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts