More

    ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ; ಆಗಸ್ಟ್​ 2ರಿಂದ ಅರ್ಜಿಗಳ ವಿಚಾರಣೆ: ಸುಪ್ರೀಂ ಕೋರ್ಟ್​

    ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ 370ನೇ ವಿಧಿ ರದ್ದತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಆಗಸ್ಟ್​ 2ರಿಂದ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ.

    370ನೇ ವಿಧಿ ರದ್ದತಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸಿಜೆಐ ಡಿ.ವೈ. ಚಂದ್ರಚೂಡ್​, ಸಂಜಯ್​ ಕಿಶನ್​ ಕೌಲ್​, ಸಂಜೀವ್​ ಖನ್ನಾ, ಬಿ.ಆರ್​. ಗವಾಯಿ ಮತ್ತು ಸೂರ್ಯಕಾಂತ್​ ಅವರನ್ನೊಳಗೊಂಡ ಪೀಠವು ತಿಳಿಸಿದೆ.

    ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ; ಆಗಸ್ಟ್​ 2ರಿಂದ ಅರ್ಜಿಗಳ ವಿಚಾರಣೆ: ಸುಪ್ರೀಂ ಕೋರ್ಟ್​

    ಇದನ್ನೂ ಓದಿ: ಕಾಂಗ್ರೆಸ್​ ಅಡಳಿತದಲ್ಲಿ ಗೂಂಡಾ ರಾಜಕಾರಣ ರಾರಾಜಿಸುತ್ತಿದೆ: ನಳಿನ್​ ಕುಮಾರ್​ ಕಟೀಲ್

    ಸೋಮವಾರ-ಶುಕ್ರವಾರ ಹೊರತುಪಡಿಸಿ ಉಳಿದೆಲ್ಲ ದಿನವೂ ಅರ್ಜಿಗಳ ವಿಚಾರಣೆ ನಡೆಸಲಾಗುವುದು ಎಂದು ಪೀಠ ಹೇಳಿದೆ. ಪ್ರಕರಣ ಸಂಬಂಧ ಅರ್ಜಿದಾರರ ಹಾಗೂ ಸರ್ಕಾರದ ಕಡೆಯಿಂದ ತಲಾ ಇಬ್ಬರು ವಕೀಲರನ್ನು ನೇಮಿಸಲಾಗಿದೆ. ಇವರುಗಳು ಅರ್ಜಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ.

    ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಆಗಸ್ಟ್​ 5, 2019ರ ಮಳೆಗಾಲದ ಅಧಿವೇಶನದಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿಯನ್ನು ರದ್ದು ಮಾಡಿ ರಾಜ್ಯಗಳನ್ನು ವಿಭಜಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts