18 C
Bengaluru
Saturday, January 18, 2020

ಚಳಿಗಾಲದ ಅಲರ್ಜಿಗಳಿಗೇನೂ ಕೊರತೆ ಇಲ್ಲ: ಆದರೂ ಅವುಗಳಿಗಿದೆ ಪರಿಹಾರ

Latest News

ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ನವದೆಹಲಿಯಲ್ಲಿ ಜನವರಿ 20ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ವೇದಾ ಆಯ್ಕೆ

ಹಾವೇರಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ. ಹಾವೇರಿ ಜಿಲ್ಲೆಯ ಬ್ಯಾಡಗಿ ವಿದ್ಯಾರ್ಥಿನಿ ಪಿ‌. ವೇದಾ ಆಯ್ಕೆಯಾಗಿದ್ದು, ಜನವರಿ 20...

ಅನೇಕರಿಗೆ ಚಳಿಗಾಲದಲ್ಲಿ ಅಲರ್ಜಿ ಕಾಡುವುದು ಅಧಿಕ. ಈ ವೇಳೆ ವಾತಾವರಣದಲ್ಲಿ ಧೂಳೇಳುವುದರಿಂದ ಈ ಸಮಸ್ಯೆಗಳು ಹೆಚ್ಚು ಕಾಡುತ್ತವೆ. ಮಳೆಗಾಲ ಮುಗಿದಿರುವುದು ಮಣ್ಣು ಮೇಲಕ್ಕೆ ಬರುತ್ತದೆ. ಆ ಧೂಳು ತಕ್ಷಣಕ್ಕೆ ನಮ್ಮ ಮೂಗು ಅಥವಾ ಬಾಯಿಯ ಮುಖಾಂತರ ದೇಹವನ್ನು ಪ್ರವೇಶಿಸಿ ಅಲರ್ಜಿಗೆ ಕಾರಣವಾಗುತ್ತದೆ.

ಈ ವೇಳೆ ಸಾಧ್ಯವಾದಷ್ಟರ ಮಟ್ಟಿಗೆ ಧೂಳಿನಿಂದ ದೂರವಿರುವುದು ಒಳ್ಳೆಯದು. ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದರಿಂದ ನಮ್ಮ ಶ್ವಾಸಕೋಶವನ್ನು, ದೇಹವನ್ನು ನಿರ್ವಹಿಸಲು ಸುಲಭ. ಜಠರಾಗ್ನಿಯನ್ನು ತೃಪ್ತಿಪಡಿಸುವಂಥ ಆಹಾರಪದಾರ್ಥಗಳನ್ನು ಸೇವಿಸಬೇಕು.

ಅತಿಯಾದ ತಂಪುಪದಾರ್ಥಗಳಿಂದ ತೊಂದರೆಯಾಗಬಹುದು. ಕಪಾಲಭಾತಿ, ಜಲನೇತಿ, ಸೂತ್ರನೇತಿ ಮುಂತಾದ ಯೋಗಕ್ರಿಯೆಗಳಿಂದ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಹಗಲು ನಿದ್ರಿಸುವ ರೂಢಿ ಇದ್ದಲ್ಲಿ ಅಲರ್ಜಿ ಇರುವವರು ಆ ಅಭ್ಯಾಸವನ್ನು ದೂರಮಾಡುವುದು ಉತ್ತಮ. ಫೇಶಿಯಲ್ ಸ್ಟೀಮ್ ತೆಗೆದುಕೊಳ್ಳುವುದು ಸಹಕಾರಿ.

ಚಿಟಿಕೆ ಅರಿಶಿಣಕ್ಕೆ ಸಮಪ್ರಮಾಣದಲ್ಲಿ ತುಪ್ಪ ಮತ್ತು ಜೋನಿಬೆಲ್ಲ ಬೆರೆಸಿ ಪ್ರತಿನಿತ್ಯ ಸೇವಿಸುವುದರಿಂದ ಅಲರ್ಜಿ ಸಮಸ್ಯೆ ಕ್ರಮೇಣ ಕಡಿಮೆಯಾಗುತ್ತದೆ. ತಲಾ ಹತ್ತು ಗ್ರಾಂ ಶುಂಠಿ, ಕಾಳುಮೆಣಸು, ಹಿಪ್ಪಲಿ, ಹುಣಸೆಹಣ್ಣು, ಜೀರಿಗೆ ತೆಗೆದುಕೊಂಡು 2.5 ಗ್ರಾಂ ಏಲಕ್ಕಿ ಪುಡಿ, 2.5 ಗ್ರಾಂ ದಾಲ್ಚಿನ್ನಿ ಪುಡಿ (ಚಕ್ಕೆ ಪುಡಿ) ಹಾಕಿ ಚೆನ್ನಾಗಿ ಮಿಶ್ರಣ ಮಾಡಿಟ್ಟುಕೊಳ್ಳಬೇಕು. ಬೆಳಗ್ಗೆ ಮತ್ತು ರಾತ್ರಿ ಜೋನಿಬೆಲ್ಲಕ್ಕೆ 1.5 ಗ್ರಾಂ ಈ ಪುಡಿಯನ್ನು ಸೇರಿಸಿ ಸೇವಿಸುವುದರಿಂದ ಧೂಳಿನ ಅಲರ್ಜಿ, ಅಸ್ತಮಾ, ಗಂಟಲು ಕೆರೆತ, ಪದೇಪದೆ ಸೀನುವುದೂ ಕಡಿಮೆಯಾಗುತ್ತದೆ.

ಸೀನು ಬಂದು ಬಂದು ತಲೆಭಾರ, ಮೂಗಿನಲ್ಲಿ ನೀರಿಳಿಯುವುದು ಆದಾಗ ಬಿಸಿನೀರಿನಲ್ಲಿ ಶುಂಠಿಪುಡಿ ಬೆರೆಸಿ, ಬೇಕಾದಲ್ಲಿ ಇನ್ನಷ್ಟು ಬಿಸಿ ಮಾಡಿಕೊಂಡು ಹಣೆಗೆ, ಸೈನಸ್ ಇರುವ ಜಾಗದಲ್ಲಿ ಲೇಪನ ಮಾಡಿಕೊಳ್ಳುವುದರಿಂದ ತಲೆಭಾರ ಕಡಿಮೆಯಾಗುತ್ತದೆ. ಕಫ ಕಟ್ಟಿಕೊಂಡಿದ್ದಲ್ಲಿ ಕರಗುತ್ತದೆ. ಶುದ್ಧ ಎಳ್ಳೆಣ್ಣೆಯಿಂದ ಬಾಯಿ ಮುಕ್ಕಳಿಸುವುದರಿಂದ ಚಳಿಗಾಲದಲ್ಲಿ ಆಗುವ ಅಲರ್ಜಿಗಳಿಂದ ದೂರವಿರಲು ಸಾಧ್ಯ.

ವಾರಕ್ಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಉಪವಾಸ ಮಾಡುವುದು ಉತ್ತಮ. ಆದರೆ ಈ ಸಮಯದಲ್ಲಿ ದೇಹದಲ್ಲಿ ಜೀರ್ಣಶಕ್ತಿ ಚೆನ್ನಾಗಿರುವುದರಿಂದ ಅತೀ ಹೆಚ್ಚಿನ ಪ್ರಮಾಣದಲ್ಲಿ ಉಪವಾಸ ಮಾಡುವುದೂ ಸರಿಯಲ್ಲ.

ಜವೆಗೋಧಿ, ಹಳೆಯ ಅಕ್ಕಿ, ಹುರುಳಿ, ಹೆಸರುಬೇಳೆ, ಬದನೆಕಾಯಿ, ಪಡವಲಕಾಯಿ, ಬೆಳ್ಳುಳ್ಳಿ, ಮಸಾಲೆ ಪದಾರ್ಥಗಳು, ಕೊಬ್ಬಿನಂಶ ಹೆಚ್ಚಿರುವ ಪದಾರ್ಥಗಳನ್ನು (ಬಾದಾಮಿ, ಗೋಡಂಬಿ, ಶೇಂಗಾದಂತಹ ನಟ್ಸ್​ಗಳು, ಹಸಿ ತೆಂಗಿನಕಾಯಿ, ತುಪ್ಪ, ಬೆಣ್ಣೆ, ಇನ್ನಿತರೆ ಹಾಲಿನ ಉತ್ಪನ್ನಗಳು ಇತ್ಯಾದಿ) ಹೆಚ್ಚು ಬಳಸಬೇಕು. ಶೀತ ಗಾಳಿಯ ವಾತಾವರಣಕ್ಕೆ ನಮ್ಮ ಮೈಯನ್ನು ಒಡ್ಡಿಕೊಳ್ಳದೆ ಇರುವುದು ಉತ್ತಮ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...