blank

ಕೃತಕ ಬುದ್ಧಿಮತ್ತೆ ಜೀವನದ ಅವಿಭಾಜ್ಯ ಅಂಗ

blank

ಕುಮಟಾ: ಕೃತಕ ಬುದ್ಧಿಮತ್ತೆ (ಎಐ) ಎಂಬುದು ಹೃದಯವಿಲ್ಲದ ಮೆದುಳು. ಆದರೆ, ಕೃತಕ ಬುದ್ಧಿಮತ್ತೆ ಜೀವನದ ಅವಿಭಾಜ್ಯ ಭಾಗವಾಗಿದೆ. ಮನುಷ್ಯ ಒಂದಿಲ್ಲೊಂದು ಬಗೆಯಲ್ಲಿ ಕೃತಕ ಬುದ್ಧಿಮತ್ತೆಯ ಜಾಲಕ್ಕೆ ಸಿಲುಕಿದ್ದಾನೆ ಎಂದು ವಿಧಾತ್ರಿ ಅಕಾಡೆಮಿಯ ಹಿರಿಯ ಭೌತಶಾಸ್ತ್ರ ಉಪನ್ಯಾಸಕ ಪಾಂಡುರಂಗ ಪಾರ್ಥಸಾರಥಿ ಹೇಳಿದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ವತಿಯಿಂದ ‘ಶಿಕ್ಷಕರ ಶಿಕ್ಷಣ ಯೋಜನೆ’ ಸಹಯೋಗದಲ್ಲಿ ಕೊಂಕಣ ಎಜುಕೇಶನ್ ಟ್ರಸ್ಟ್​ನ ಸಿ.ವಿ.ಎಸ್.ಕೆ. ಪ್ರೌಢಶಾಲೆಯಲ್ಲಿ ಆರಂಭಗೊಂಡ ಅಟಲ್ ಟಿಂಕರಿಂಗ್ ಪ್ರಯೋಗಾಲಯದ ಬಲವರ್ಧನಾ ಮತ್ತು ಕೃತಕ ಬುದ್ಧಿಮತ್ತೆ ಪರಿಚಯ ಕಾರ್ಯಾಗಾರ ಹಾಗೂ ಜಿಲ್ಲಾಮಟ್ಟದ ವಿಜ್ಞಾನ ಪ್ರಯೋಗ ಮಾದರಿ ಪ್ರದರ್ಶನವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಅತ್ಯಾಧುನಿಕ ಯುಗದಲ್ಲಿ ಕೃತಕ ಬುದ್ಧಿಮತ್ತೆ ಎಷ್ಟೇ ಮುಂದುವರೆದರೂ ಮಾನವ ಯುಕ್ತಿಗಿಂತ ಮಿಗಿಲಾಗಲು ಅಸಾಧ್ಯ. ಪ್ರಯೋಗಾಲಯವು ಮಕ್ಕಳಲ್ಲಿ ಸಂಶೋಧನಾ ಮತ್ತು ನಾವಿನ್ಯ ಗುಣವನ್ನು ಹೆಚ್ಚಿಸುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೊಂಕಣ ಎಜುಕೇಶನ್ ಟ್ರಸ್ಟಿನ ಟ್ರಸ್ಟಿ ಡಿ.ಡಿ. ಕಾಮತ ಮಾತನಾಡಿ, ಕಾರ್ಯಕ್ರಮವನ್ನು ನಮ್ಮ ಸಂಸ್ಥೆಯಲ್ಲಿ ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಬುದ್ಧಿಮತ್ತೆಯ ಅನಾವರಣಕ್ಕಾಗಿ ವೇದಿಕೆ ಕಲ್ಪಿಸಿದಂತಾಗಿದೆ. ವಿದ್ಯಾರ್ಥಿಗಳು ಇದರ ಸಂಪೂರ್ಣ ಪ್ರಯೋಜನ ಪಡೆದು, ತಮ್ಮ ಕಲ್ಪನಾಲೋಕದ ವಿಜ್ಞಾನ ಮಾದರಿಗಳನ್ನು ಸಂಶೋಧಿಸಿ ಸಮಾಜದಲ್ಲಿ ಬೆಳೆಯಬೇಕು ಎಂದರು.

ಕೃತಕ ಬುದ್ಧಿಮತ್ತೆ ಪರಿಚಯ ಕಾರ್ಯಾಗಾರದಲ್ಲಿ ಸಾಗರದ ಹೊಂಗಿರಣ ಪಿಯು ಕಾಲೇಜಿನ ಪ್ರಾಚಾರ್ಯ ರೋಹಿತ ವಿ., ಅಟಲ್ ಟಿಂಕರಿಂಗ್ ಲ್ಯಾಬ್​ನ ಕಾರ್ಯವೈಖರಿ ಕುರಿತು ವಿದ್ಯಾರ್ಥಿಗಳಿಗೆ ಹಾಗೂ ವಿಜ್ಞಾನ ಶಿಕ್ಷಕರಿಗೆ ಉಪನ್ಯಾಸದ ಮೂಲಕ ವಿವರಿಸಿದರು. ಡಯಟ್ ಉಪನ್ಯಾಸಕಿ ಡಾ. ಶುಭಾ ನಾಯಕ ಮಾತನಾಡಿದರು. ಮುಕ್ತಾ ನಾಯಕ, ಶೈಕ್ಷಣಿಕ ಸಲಹೆಗಾರ ಆರ್.ಎಚ್. ದೇಶಭಂಡಾರಿ, ಸರಸ್ವತಿ ಪಿ.ಯು. ಕಾಲೇಜಿನ ಪ್ರಾಚಾರ್ಯ ಕಿರಣ ಭಟ್ಟ, ವಿಧಾತ್ರಿ ಅಕಾಡೆಮಿಯ ಸಹ ಸಂಸ್ಥಾಪಕ ಗುರುರಾಜ ಶೆಟ್ಟಿ ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧೆಡೆಯಿಂದ ವಿದ್ಯಾರ್ಥಿಗಳು ವಿಜ್ಞಾನ ಪ್ರಯೋಗ ಮಾದರಿ ಪ್ರದರ್ಶಿಸಿದರು. ಮುಖ್ಯಶಿಕ್ಷಕಿ ಸುಮಾ ಪ್ರಭು ಸ್ವಾಗತಿಸಿದರು. ಅಮಿತಾ ಗೋವೆಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿನಯಾ ನಾಯಕ ನಿರೂಪಿಸಿದರು. ಪೂರ್ಣಿಮಾ ಶಾನಭಾಗ ವಂದಿಸಿದರು.

 

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…