Heart Attack: ರಿಷಬ್ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್-1’ ಮತ್ತೆ ಸುದ್ದಿಯಲ್ಲಿದೆ.ಅದಕ್ಕೆ ಕಾರಣ ಈ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಈ ಹಿಂದೆ ಮೃತಪಟ್ಟಿದ್ದಾರೆ. ಇದೀಗ ಮತ್ತೊಬ್ಬ ಕಲಾವಿದ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಇದನ್ನೂ ಓದಿ:40 ವರ್ಷದ ವೈದ್ಯ, 24 ವರ್ಷದ ಹುಡುಗನಾಗಿ ಬದಲಾಗಿದ! ಇದು ಹೇಗೆ ಗೊತ್ತಾ? Longevity
ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ನಲ್ಲಿ ಪಾಲ್ಗೊಳ್ಳಲು ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ವಿ ಕೆ ಎಂಬವರು ಆಗುಂಬೆ ಹೋಂ ಸ್ಟೇಯಲ್ಲಿ ಕಳೆದ ರಾತ್ರಿ ತಂಗಿದ್ದ ವೇಳೆ ಅವರಿಗೆ ಹೃದಯಾಘಾತವಾಗಿದೆ.
ತೀರ್ಥಹಳ್ಳಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಕಾಂತಾರ ಚಾಪ್ಟರ್ 1 ಸಿನಿಮಾ ಚಿತ್ರೀಕರಣ ಆರಂಭವಾದ ನಂತರ ಇದು ಮೂರನೇ ಸಾವಾಗಿದೆ.
40 ವರ್ಷದ ವೈದ್ಯ, 24 ವರ್ಷದ ಹುಡುಗನಾಗಿ ಬದಲಾಗಿದ! ಇದು ಹೇಗೆ ಗೊತ್ತಾ? Longevity