

ಮಂದಾರ್ತಿ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ದಶಾವತಾರ ಐದು ಮೇಳಗಳ ಈ ಸಾಲಿನ ಕೊನೆಯ ದೇವರ ಸೇವೆ ಆಟ ಶ್ರೀ ಕ್ಷೇತ್ರದಲ್ಲಿ ಜರುಗಿತು. ಈ ಸಂಧರ್ಭ ಪ್ರಸ್ತುತ ಸಾಲಿನ ರಾಮ ಗಾಣಿಗ ಪ್ರಶಸ್ತಿಯನ್ನು ಹಿರಿಯ ಕಲಾವಿದ ಜಮದಗ್ನಿ ಶೀನ ನಾಯ್ಕ ಅವರಿಗೆ ಪ್ರದಾನ ಮಾಡಲಾಯಿತು. 30 ವರ್ಷಕ್ಕೂ ಮಿಕ್ಕಿ ಮೇಳದಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತರಾದ ರಮಾಕಾಂತ ಮಹಾದೇವ ಮಡಿವಾಳರನ್ನು ಸನ್ಮಾನಿಸಲಾಯಿತು.
ದೇವಸ್ಥಾನದ ಅಧ್ಯಕ್ಷ ಎಚ್.ಧನಂಜಯ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಜಯಮ್ಮ ಪಿ., ನಿವೃತ್ತ ಪ್ರಾಂಶುಪಾಲ ಡಾ.ಜಗದೀಶ್ ಶೆಟ್ಟಿ, ಎಂಐಟಿಯ ಪ್ರೊ.ಎಸ್.ವಿ.ಉದಯ ಕುಮಾರ್ ಶೆಟ್ಟಿ, ಆನುವಂಶಿಕ ಮೊಕ್ತೇಸರರಾದ ಎಚ್.ಪ್ರಭಾಕರ ಶೆಟ್ಟಿ, ಎಚ್.ಶಂಭು ಶೆಟ್ಟಿ, ಆರ್.ಶ್ರೀನಿವಾಸ ಶೆಟ್ಟಿ, ಎಚ್.ಜಯರಾಮ ಶೆಟ್ಟಿ, ಹಿರಿಯರಾದ ಶೇಡಿಕೊಡ್ಲು ವಿಠಲ್ ಶೆಟ್ಟಿ, ಗ್ರಾಮಸ್ಥರು, ಹೆಗ್ಗುಂಜೆ ನಾಲ್ಕು ಮನೆಯವರು, ಶ್ರೀ ದೇಗುಲದ ಅರ್ಚಕ ವೃಂದ, ಸಿಬ್ಬಂದಿ ಮತ್ತು ಐದು ಮೇಳಗಳ ಕಲಾವಿದರು ಉಪಸ್ಥಿತರಿದ್ದರು. ಇಂಜಿನಿಯರ್ ಪ್ರದೀಪ್ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ಶಶಿಧರ ಶೆಟ್ಟಿ ನಂಚಾರು ನಿರೂಪಿಸಿದರು.