More

    ಕಲಾವಿದರ ಪ್ರೋತ್ಸಾಹಿಸಲು ವೇದಿಕೆ ಬೇಕು

    ಹಾರೂಗೇರಿ: ಪ್ರತಿ ವ್ಯಕ್ತಿಯಲ್ಲಿ ಹುದುಗಿರುವ ಪ್ರತಿಭೆ ಹೊರೆಗೆಳೆಯಲು ಕುಡಚಿ ಪ್ರತಿಭಾ ಪ್ರದರ್ಶನ ಆಯೋಜಿಸಿ ಕಲಾವಿದರನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

    ಪಟ್ಟಣದ ಕಾಳಿಕಾದೇವಿ ದೇವಸ್ಥಾನದ ಸಭಾಭವನದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಜನ್ಮದಿನದ ಅಂಗವಾಗಿ ಜೊಲ್ಲೆ ಗ್ರೂಪ್ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಕುಡಚಿ ಪ್ರತಿಭಾ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

    ಮಾಜಿ ಶಾಸಕ ಪಿ. ರಾಜೀವ ಮಾತನಾಡಿ, ಮೊದಲು ಜನರಿಗೆ ಮೂಲ ಸೌಕರ್ಯ ಕಲ್ಪಿಸಬೇಕಿದ್ದ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಸಾರಾಯಿ ಅಂಗಡಿಗಳಿಗೆ ಪರವಾನಗಿ ನೀಡಿ ಬಡವರಿಗೆ ಮಾರಕವಾಗುತ್ತಿದೆ. ಕೂಡಲೇ ಪರವಾನಗಿ ಆದೇಶ ವಾಪಸ್ ಪಡೆಯಬೇಕು ಸರ್ಕಾರವನ್ನು ಒತ್ತಾಯಿಸಿದರು. ಶಾಸಕ ದುರ್ಯೋಧನ ಐಹೊಳೆ ಮಾತನಾಡಿ, ಗ್ರಾಮೀಣ ಮಕ್ಕಳು ಪ್ರತಿಭಾ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ವೇದಿಕೆಗಳ ಸದುಪಯೋಗ ಪಡೆಯಬೇಕು ಎಂದರು. ಪರಮಾನಂದವಾಡಿ ಡಾ.ಅಭಿನವ ಬ್ರಹ್ಮಾನಂದ ಸ್ವಾಮೀಜಿ ಮಾತನಾಡಿ, ಶಿಕ್ಷಣ, ಸಹಕಾರ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಅನೇಕರಿಗೆ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆ ಬದುಕು ಕಟ್ಟಿಕೊಟ್ಟಿದೆ. ಸಂಸದರಿಂದ ಇನ್ನಷ್ಟು ಜನಪರ ಕಾರ್ಯಗಳು ನೆರವೇರಲಿ ಎಂದರು.

    ಕೋಳಿಗುಡ್ಡದ ಸ್ವರೂಪಾನಂದ ಸ್ವಾಮೀಜಿ, ಶರಣ ವಿಚಾರವಾಹಿನಿ ಅಧ್ಯಕ್ಷ ಐ. ಆರ್.ಮಠಪತಿ, ವಿಎಚ್ಪಿ ಮುಖಂಡ ಹಣಮಂತ ಯಲಾಶೆಟ್ಟಿ, ಬಸನಗೌಡ ಆಸಂಗಿ, ರಮೇಶ ಖೇತಗೌಡರ, ನಿಂಗಪ್ಪ ಪಕಾಂಡಿ, ಶ್ರೀಶೆಲ ಉಮರಾಣಿ ಇತರರಿದ್ದರು. ಕುಡಚಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಖಾನಗೌಡರ ಸ್ವಾಗತಿಸಿದರು, ರಮೇಶ ಪಾಟೀಲ ನಿರೂಪಿಸಿ, ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts