More

    ಲೋಕಸಭಾ ಚುನಾವಣೆ: ಅರುಣ್ ಗೋಯಲ್ ರಾಜೀನಾಮೆ ಬೆನ್ನಲ್ಲೇ ಕೇಳಿಬಂತು ಹೀಗೊಂದು ಸುದ್ದಿ

    ನವದೆಹಲಿ: ಲೋಕಸಭೆ ಚುನಾವಣೆ 2024 ರ ಸಂಭ್ರಮದ ನಡುವೆ, ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ ನೀಡುವ ಮೂಲಕ ವಿವಾದವನ್ನು ಸೃಷ್ಟಿಸಿದ್ದಾರೆ. ಇದೀಗ ಅರುಣ್ ಗೋಯಲ್ ರಾಜೀನಾಮೆ ವಿಚಾರದಲ್ಲಿ ರಾಜಕೀಯ ಕದನ ಆರಂಭವಾಗಿದೆ. ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ರಾಜೀನಾಮೆ ಕುರಿತು ಪ್ರಶ್ನೆಗಳನ್ನು ಎತ್ತಿವೆ.

    ಚುನಾವಣಾ ಆಯೋಗ ಮತ್ತು ಬಿಜೆಪಿ ನಡುವಿನ ಭಿನ್ನಾಭಿಪ್ರಾಯವೇ ರಾಜೀನಾಮೆಗೆ ಕಾರಣ ಎನ್ನಲಾಗಿದೆ. ಅರುಣ್ ಗೋಯಲ್ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಹೀಗಾಗಿ ಅವರು ಚುನಾವಣಾ ಆಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ, ಆದರೆ ಅರುಣ್ ಗೋಯಲ್ ಚುನಾವಣೆಯಲ್ಲಿ ಸ್ಪರ್ಧಿಸಬಹುದೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

    ನಿಯಮಾನುಸಾರ ಚುನಾವಣೆಗೆ ಸ್ಪರ್ಧೆ
    ಚುನಾವಣಾ ಆಯುಕ್ತ ಹುದ್ದೆ ತೊರೆದಿರುವ ಅರುಣ್ ಗೋಯಲ್ 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಚುನಾವಣೆಗೆ ಸ್ಪರ್ಧಿಸಬಹುದು ಎಂಬ ಊಹಾಪೋಹಗಳಿವೆ. ಭಾರತೀಯ ಸಂವಿಧಾನ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ, ಅವರು ಈಗ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗಿದ್ದಾರೆ. ಏಕೆಂದರೆ ಸಂವಿಧಾನದ ಪ್ರಕಾರ ಯಾವುದೇ ವ್ಯಕ್ತಿ ಸರ್ಕಾರಿ ಹುದ್ದೆಯಲ್ಲಿದ್ದುಕೊಂಡು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಆದರೆ ಅರುಣ್ ಗೋಯಲ್ ಸರ್ಕಾರಿ ಹುದ್ದೆ ತೊರೆದಿದ್ದಾರೆ.

    ಹೀಗಾಗಿ ಅವರು ಈಗ ಚುನಾವಣೆಗೆ ಸ್ಪರ್ಧಿಸಬಹುದು. ಅವರ ರಾಜೀನಾಮೆ ನಂತರ ಈಗ 3 ಸದಸ್ಯರ ಚುನಾವಣಾ ಆಯೋಗದಲ್ಲಿ 2 ಹುದ್ದೆಗಳು ಖಾಲಿ ಇವೆ. ಈ ಹಿಂದೆ, ಚುನಾವಣಾ ಆಯುಕ್ತರಾದ ಅನುಪ್ ಕುಮಾರ್ ಪಾಂಡೆ ಅವರು 15 ಫೆಬ್ರವರಿ 2024 ರಂದು ನಿವೃತ್ತರಾಗಿದ್ದರು.

    ಮೂಲಗಳ ಪ್ರಕಾರ, 1985 ರ ಬ್ಯಾಚ್ ಐಎಎಸ್ ಅಧಿಕಾರಿ ಮತ್ತು ಮಾಜಿ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‌ನಿಂದ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಅವರು ಶಿರೋಮಣಿ ಅಕಾಲಿದಳದೊಂದಿಗೆ (ಎಸ್​​ಎಡಿ) ಹೆಚ್ಚು ಆತ್ಮೀಯತೆಯಿಂದ ಇದ್ದರು. ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ನಡುವೆ ಸಮನ್ವಯತೆ ತರುವಲ್ಲಿ ಗೋಯಲ್ ಪ್ರಮುಖ ಪಾತ್ರ ವಹಿಸಿದ್ದರು.

    ಶಿರೋಮಣಿ ಅಕಾಲಿದಳ ಬಿಜೆಪಿಯ ಎನ್‌ಡಿಎ ಮೈತ್ರಿಕೂಟದ ಮಿತ್ರ ಪಕ್ಷವಾಗಿತ್ತು, ಆದರೆ ರೈತರ ಚಳವಳಿಯಿಂದಾಗಿ ಇಬ್ಬರ ನಡುವೆ ಬಿರುಕು ಉಂಟಾಗಿತ್ತು. ಆ ವೇಳೆ ಅರುಣ್ ಗೋಯಲ್ ಮಧ್ಯಸ್ಥಿಕೆ ವಹಿಸಿ ಉಭಯ ಪಕ್ಷಗಳ ನಡುವೆ ಸಮನ್ವಯ ತಂದಿದ್ದರು.

    ದೇವಿಯ ಮುಂದೆ ನಾಲಿಗೆ ಕತ್ತರಿಸಿಕೊಂಡ ಅರ್ಚಕ, ಕಾರಣವೇನು ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts