

ಬೆಂಗಳೂರು: ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಸತಿ ಸಚಿವ ವಿ.ಸೋಮಣ್ಣ ಅವರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಭಾನುವಾರ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಿಎಸ್ ವೈ ವಿರುದ್ಧ ಯಾರೂ ದೂರು ನೀಡಿಲ್ಲ. ರಾಜ್ಯ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಇದೇ ಕಾರಣಕ್ಕೆ ದೂರು ನೀಡಲಾಗಿದೆ ಎಂದು ಹುಟ್ಟಿಹಾಕಿರುವ ಸಾಧ್ಯತೆಗಳಿವೆ ಎಂದರು.ಸಿಎಂ ವಿವೇಚನೆಗೆ: ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟದ್ದು. ಅವರೇ ಈ ಬಗ್ಗೆ ನಿರ್ಧರಿಸಬೇಕು. ಈ ವಿಷಯದಲ್ಲಿ ತಾವು ಮಧ್ಯೆಪ್ರವೇಶಿಸುವುದಿಲ್ಲ ಎಂದು ಅರುಣ್ ಸಿಂಗ್ ಸ್ಪಷ್ಟಪಡಿಸಿದರು.