ಸಂಘಟನಾ ಪ್ರವಾಸಕ್ಕೆ ಧುಮುಕಲಿದ್ದಾರೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

arun singh
Published on

ಬೆಂಗಳೂರು: ಬಿಜೆಪಿ ಕಾರ್ಯಕರ್ತರಲ್ಲಿ ಹುರುಪು ತುಂಬಿ ಮುಂಬರುವ ಚುನಾವಣೆಗೆ ಸಜ್ಜುಗೊಳಿಸಲು ಉದ್ದೇಶಿತ ಸಂಘಟನಾ ಪ್ರವಾಸಕ್ಕೆ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಧುಮುಕಲಿದ್ದಾರೆ.

ದೆಹಲಿಯಿಂದ ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಶನಿವಾರ, ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರ ಪಕ್ಷದ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿ ಕಾರ್ಯಕ್ರಮ ಮುಗಿದ ಬಳಿಕ ಅಂದೇ ಸಂಜೆ ಬೆಳಗಾವಿಯಿಂದ ದೆಹಲಿಗೆ ಮರು ಪ್ರಯಾಣ‌ ಬೆಳೆಸಲಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಿಷನ್‌ 150 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಪಕ್ಷ ರಣತಂತ್ರ‌ರೂಪಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಒಳಗೊಂಡ ತಂಡವು ಜನಸಂಕಲ್ಪ ರಾಜಕೀಯ ಯಾತ್ರೆ, ಪಕ್ಷದ ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಉಸ್ತುವಾರಿ ಒಳಗೊಂಡ ತಂಡವು ಸಂಘಟನಾ ಪ್ರವಾಸ ಕೈಗೊಳ್ಳಲಿದೆ.

ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷ ನಾಲ್ಕೈದು ಜಿಲ್ಲೆಗಳಲ್ಲಿ ಪ್ರವಾಸ ಮುಗಿಸಿದ್ದರೆ, ಸಿಎಂ ಬೊಮ್ಮಾಯಿ‌, ಮಾಜಿ ಸಿಎಂ ಬಿಎಸ್ ವೈ ಮೊದಲ ಹಂತದ ಯಾತ್ರೆ ಪೂರ್ಣಗೊಳಿಸಿದ್ದಾರೆ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೊದಲ ಬಾರಿಗೆ ಸಂಘಟನಾ ಪ್ರವಾಸದಲ್ಲಿ ಭಾಗವಹಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net