ಅರುಣ್ ಸೋಮಣ್ಣಗೆ ಹೊಸ ಸ್ಥಾನ; ವಿ.ಸೋಮಣ್ಣಗೆ ಸಮಾಧಾನ?

Arun Somanna
Published on

ಬೆಂಗಳೂರು: ಮಾಜಿ ಸಚಿವ ವಿ.ಸೋಮಣ್ಣ ಇತ್ತೀಚೆಗೆ ಬಿಜೆಪಿ ಕೆಲವು ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದರು ಎನ್ನಲಾಗಿದ್ದು, ಇದೀಗ ಅವರ ಪುತ್ರನಿಗೆ ಹೊಸದೊಂದು ಸ್ಥಾನ ನೀಡುವ ಮೂಲಕ ಅವರನ್ನು ಸಮಾಧಾನಪಡಿಸುವ ಪ್ರಯತ್ನ ನಡೆದಂತಿದೆ.

ವಿ.ಸೋಮಣ್ಣ ಅವರ ಪುತ್ರ ಅರುಣ್ ಸೋಮಣ್ಣಗೆ ತುಮಕೂರು ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕಗೊಳಿಸಿ ಆದೇಶ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಅರುಣ್ ಸೋಮಣ್ಣ ಅವರನ್ನು ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಎಚ್​.ಎಸ್.ರವಿಶಂಕರ್ ತಿಳಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯಲ್ಲಿ ತಮ್ಮನ್ನು ವಿಜಯನಗರಕ್ಕೆ ಸೀಮಿತ ಎಂಬಂತೆ ನೋಡಲಾಗುತ್ತಿದೆ, ಅಲ್ಲದೆ ತಮ್ಮ ಪುತ್ರನಿಗೂ ಪಕ್ಷದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಎಂದು ವಿ.ಸೋಮಣ್ಣ ಕೆಲವು ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು ಎಂಬ ಸುದ್ದಿ ಈ ಹಿಂದೆ ಹರಿದಾಡಿತ್ತು. ಆ ಹಿನ್ನೆಲೆಯಲ್ಲಿ ಅವರ ಪುತ್ರನಿಗೆ ಹೊಸ ಸ್ಥಾನ ನೀಡಿ ಆದೇಶಿಸಿರುವುದು ಗಮನ ಸೆಳೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net