More

    ಅಬಕಾರಿ ನೀತಿ ಹಗರಣ; ಕೊನೆಗೂ ನ್ಯಾಯಾಲಯಕ್ಕೆ ಹಾಜರಾದ ಕೇಜ್ರಿವಾಲ್

    ನವದೆಹಲಿ: ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.

    ಅಬಕಾರಿ ನೀತಿ ಜಾರಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ಕೇಜ್ರಿವಾಲ್ ಅವರಿಗೆ ಆರು ಬಾರಿ ಇಡಿ ಅವರಿಗೆ ಸಮನ್ಸ್​​​ ನೀಡಿತ್ತು ಒಂದಕ್ಕೂ ಉತ್ತರ ನೀಡಿಲ್ಲ. ಈ ಕಾರಣಕ್ಕೆ ಕೋರ್ಟ್​​​ ಅವರಿಗೆ ವಿಚಾರಣೆ ಬರುವಂತೆ ಆದೇಶವನ್ನು ನೀಡಿತ್ತು.

    ಇದನ್ನೂ ಓದಿ: ಕೆರೆಗೆ ಸೇರುತ್ತಿರುವ ತ್ಯಾಜ್ಯ ನೀರು; ಸಾವಿರಾರು ಮೀನುಗಳ ಮಾರಣ ಹೋಮ

    ಕೋರ್ಟ್​​ ಆದೇಶದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ದೆಹಲಿಯಲ್ಲಿ ವಿಧಾನಸಭೆ ಕಲಾಪ ನಡೆಯುತ್ತಿದ್ದು, ಇಂದು ವಿಶ್ವಾಸ ಮತಯಾಚನೆ ನಡೆಯಲಿದೆ. ಆ ಕಾರಣದಿಂದ ದೈಹಿಕವಾಗಿ ಸದನದಲ್ಲಿ ಹಾಜರಾಗಬೇಕು ಅದಕ್ಕಾಗಿ ಕೋರ್ಟ್​​ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಹಾಜರಾಗುತ್ತಿದ್ಧೇನೆ. ಮುಂದಿನ ಬಾರಿ  ವಿಚಾರಣೆಗೆ ದೈಹಿಕವಾಗಿ ಹಾಜರಾಗುವುದಾಗಿ ಕೇಜ್ರಿವಾಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

    ಅರವಿಂದ್​​​ ಕೇಜ್ರಿವಾಲ್​​ ಅವರು ಇಂದು ದೆಹಲಿ ವಿಧಾನಸಭೆಯ ಮುಂದೆ ತನ್ನ ಸರ್ಕಾರದ ಬಲವನ್ನು ಹಾಗೂ ವಿಶ್ವಾಸವನ್ನು ಮಂಡಿಸಲಿದ್ದಾರೆ. ವಿಶ್ವಾಸಮತ ಯಾಚನೆಗೆ ನೆನ್ನೆ (ಫೆ.16) ನಿರ್ಣಯವನ್ನು ಮಂಡಿಸಿದ್ದಾರೆ. ದೆಹಲಿಯಲ್ಲಿ ವಿಧಾಸಭೆ ಕಲಾಪ ನಡೆಯುತ್ತಿದ್ದು, ಬಜೆಟ್​​​ ಮಂಡನೆಗೂ ಮುನ್ನ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts