More

  ಅಬಕಾರಿ ನೀತಿ ಹಗರಣ| ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಬಂಧನ

  ನವದೆಹಲಿ: 2021-22ರಲ್ಲಿ ದೆಹಲಿ ಸರ್ಕಾರ ಜಾರಿಗೆ ತರಲು ಉದ್ಧೇಶಿಸಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿ ಸಮನ್ಸ್​ ಜಾರಿ ಮಾಡಿ ಬಂಧಿಸಿದ್ದಾರೆ.

  ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಜಾರಿ ನಿರ್ದೆಶನಾಲಯದ ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿ ಸಮನ್ಸ್​ ಜಾರಿ ಮಾಡಿ ವಶಕ್ಕೆ ಪಡೆದಿದ್ದಾರೆ.

  ಇದನ್ನೂ ಓದಿ: ಐಪಿಎಲ್ ಆರಂಭಕ್ಕೂ ಮುನ್ನ ರಾಜಸ್ಥಾನ ರಾಯಲ್ಸ್​ಗೆ ಮತ್ತೊಂದು ಶಾಕ್; ಟೂರ್ನಿಯಿಂದ ಹಿಂದೆ ಸ್ಟಾರ್​ ಆಟಗಾರ

  ದೆಹಲಿ ಹೈಕೋರ್ಟ್ ಕೇಜ್ರಿವಾಲ್​ ರಕ್ಷಣೆಯನ್ನು ನಿರಾಕರಿಸಿದ ಬೆನ್ನಲ್ಲೇ ಅವರ ವಕೀಲರು ಸುಪ್ರೀಂ ಕೋರ್ಟ್ ಕದ ತಟ್ಟಿದ್ದು, ತುರ್ತು ವಿಚಾರಣೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಜಾರಿ ನಿರ್ದೇಶನಾಲಯದ ತಂಡವು ಕೇಜ್ರಿವಾಲ್ ಅವರ ನಿವಾಸಕ್ಕೆ ಸರ್ಚ್ ವಾರೆಂಟ್ ಹೊರಡಿಸಿದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

  ಕೇಜ್ರಿವಾಲ್ ಅರ್ಜಿ ಕುರಿತಂತೆ ಇಂದು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಮತ್ತು ಮನೋಜ್ ಜೈನ್ ಅವರಿದ್ದ ವಿಭಾಗೀಯ ಪೀಠ, ಪ್ರಕರಣದಲ್ಲಿ ತಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ರಕ್ಷಣೆ ನೀಡಬೇಕೆಂದು ಕೋರಿದ್ಧ ಕೇಜ್ರಿವಾಲ್ ಮನವಿಯನ್ನು ತಳ್ಳಿಹಾಕಿತ್ತು. ಎಎಪಿ ನಾಯಕನ ಅರ್ಜಿಯ ಮುಂದಿನ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ನ್ಯಾಯಾಲಯ ಮುಂದೂಡಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts