More

    ಬಂಧನ, ಇಡಿ ಕಸ್ಟಡಿ ಪ್ರಶ್ನಿಸಿ ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ ಅರವಿಂದ್ ಕ್ರೇಜಿವಾಲ್!

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಬಂಧನ ಮತ್ತು ಜಾರಿ ನಿರ್ದೇಶನಾಲಯ ಕಸ್ಟಡಿ ವಿಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

    ಇದನ್ನೂ ಓದಿ: ರೈಲಿನೊಳಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ: ಸ್ಥಳದಲ್ಲೇ ನಾಮಕರಣ! ಹೆಸರು ಕೇಳಿದ್ರೆ ಶಾಕ್ ಆಗ್ತೀರಾ!

    ಗುರುವಾರ ಕೇಂದ್ರ ತನಿಖಾ ಸಂಸ್ಥೆ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಕಳುಹಿಸಲಾಗಿದೆ. ಈ ವಿಷಯದಲ್ಲಿ ತುರ್ತು ವಿಚಾರಣೆಯನ್ನು ಕೋರಿ ದೆಹಲಿ ಹೈಕೋರ್ಟ್‌ಗೆ ಕೇಜ್ರಿವಾಲ್ ಮನವಿ ಸಲ್ಲಿಸಿದ್ದಾರೆ.

    ಮಾರ್ಚ್ 24 ಭಾನುವಾರದೊಳಗೆ ಹಂಗಾಮಿ ಮುಖ್ಯ ನ್ಯಾಯಾಧೀಶರಿಂದ ತಕ್ಷಣದ ವಿಚಾರಣೆಯನ್ನು ಕೋರಲಾಗಿದೆ. ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ. ದೆಹಲಿ ಅಬಕಾರಿ ನೀತಿ 2022 ರ ರಚನೆ ಮತ್ತು ಅನುಷ್ಠಾನದಲ್ಲಿ ಅಕ್ರಮಗಳು ಮತ್ತು ಮನಿ ಲಾಂಡರಿಂಗ್ ಆರೋಪಕ್ಕೆ ಸಂಬಂಧಿಸಿದ್ದು, ನಂತರ ಅದನ್ನು ರದ್ದುಗೊಳಿಸಲಾಯಿತು.

    ದೆಹಲಿ ಅಬಕಾರಿ ನೀತಿ ಅಕ್ರಮ ತನಿಖೆಗೆ ಸಂಬಂಧಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ (ಮಾರ್ಚ್‌ 21) ಸಂಜೆ ಬಂಧಿಸಿತ್ತು. ಆಮ್ ಆದ್ಮಿ ಪಕ್ಷಕ್ಕೆ ಪಾವತಿಸಿದ 100 ಕೋಟಿ ರೂಪಾಯಿ ಲಂಚಕ್ಕೆ ಬದಲಾಗಿ ಈಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ 2021-22 ರ ಮೂಲಕ ದಕ್ಷಿಣದ ಕೆಲವು ಉದ್ಯಮಿಗಳು ಮತ್ತು ರಾಜಕಾರಣಿಗಳ ಗುಂಪು ಲಾಭ ಪಡೆದಿದೆ ಎಂಬುದನ್ನು ಜಾರಿ ನಿರ್ದೇಶನಾಲಯ ನಿರೂಪಿಸಿದೆ. ಹೀಗಾಗಿ ಕೇಜ್ರಿವಾಲ್ ಅವರ ಬಂಧನವಾಗಿದೆ.

    ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಸದ ಸಂಜಯ್ ಸಿಂಗ್ ಮತ್ತು ಬಿಆರ್‌ಎಸ್‌ ನಾಯಕಿ ಕೆ ಕವಿತಾ ನಂತರ ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟ ನಾಲ್ಕನೇ ಹೈಪ್ರೊಫೈಲ್ ರಾಜಕಾರಣಿ ಅರವಿಂದ್ ಕೇಜ್ರಿವಾಲ್‌.

    ರೈಲಿನೊಳಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ: ಸ್ಥಳದಲ್ಲೇ ನಾಮಕರಣ! ಹೆಸರು ಕೇಳಿದ್ರೆ ಶಾಕ್ ಆಗ್ತೀರಾ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts