More

    ಸತತ ಮೂರನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ್ ಕೇಜ್ರಿವಾಲ್​…

    ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಆಮ್​ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್​ ಅವರು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

    ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಅರವಿಂದ್ ಕೇಜ್ರೀವಾಲ್​ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇವರೊಟ್ಟಿಗೆ ಆಪ್​ನ ಸಚಿವರಾದ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್​, ಗೋಪಾಲ್​ ರೈ, ಕೈಲಾಶ್​ ಗೆಹ್ಲೋಟ್​, ಇಮ್ರಾನ್​ ಹುಸ್ಸೇನ್​, ರಾಜೇಂದ್ರ ಪಾಲ್​ ಗೌತಮ್​ ಅವರು ಪ್ರಮಾಣ ವಚನ ಸ್ವೀಕರಿಸಿದರು. ಲೆಫ್ಟಿನಂಟ್​ ಗವರ್ನರ್​ ಅನಿಲ್​ ಬೈಜಾಲ್​ ಅವರು ಮುಖ್ಯಮಂತ್ರಿ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧನೆ ಮಾಡಿದರು.

    ಸಮಾರಂಭದಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 70ರಲ್ಲಿ 62 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ.(ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts