

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು (ಮಂಗಳವಾರ) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜಭವನಕ್ಕೆ ತೆರಳಿದ ಅರವಿಂದ ಕೇಜ್ರಿವಾಲ್ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕೇಜ್ರಿವಾಲ್ ಸಚಿವ ಸಂಪುಟ ಸಾಥ್ ನೀಡಿದೆ. ಇದೇ ಸಂದರ್ಭದಲ್ಲಿ ಹೊಸ ಸರ್ಕಾರ ರಚನೆಗೆ ಅತಿಶಿ ಮರ್ಲೆನಾ ಸಿಂಗ್ ಹಕ್ಕು ಮಂಡಿಸಿದರು. ಸೆ. 15 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮುಂದಿನ 48 ಗಂಟೆಗಳ ಒಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.
ದೆಹಲಿಯ ಜನರು ಅವರಿಗೆ "ಪ್ರಾಮಾಣಿಕತೆಯ ಪ್ರಮಾಣಪತ್ರ" ನೀಡಿದಾಗ ಮಾತ್ರ ಮುಖ್ಯಮಂತ್ರಿ ಸ್ಥಾನವನ್ನು ಪುನರಾರಂಭಿಸುವುದಾಗಿ ಹೇಳಿದ್ದಾರೆ. ಪರಿಸ್ಥಿತಿಯನ್ನು ಉದ್ದೇಶಿಸಿ, ಎಎಪಿ ನಾಯಕ ಗೋಪಾಲ್ ರೈ ನಾಯಕತ್ವದ ಪರಿವರ್ತನೆಯನ್ನು ದೃಢಪಡಿಸಿದರು, “ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಎಲ್ಜಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಸಚಿವರಾಗಿರುವ ಅತಿಶಿ ಅವರು . ರಾಜಧಾನಿಯನ್ನು ಮುನ್ನಡೆಸುವ ತನ್ನ ಬದ್ಧತೆಯನ್ನು ವ್ಯಕ್ತಪಡಿಸುವಾಗ ಕೇಜ್ರಿವಾಲ್ ಅವರ ರಾಜೀನಾಮೆಯ
ಅರವಿಂದ್ ಕೇಜ್ರಿವಾಲ್ ಅವರ ಉನ್ನತ ಸ್ಥಾನಕ್ಕೆ ರಾಜೀನಾಮೆ ಬಳಿಕ ದೆಹಲಿ ಶಿಕ್ಷಣ ಮತ್ತು ಲೋಕೋಪಯೋಗಿ ಸಚಿವೆ ಅತಿಶಿ ಅವರು ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ನಡೆದ ಆಮ್ ಆದ್ಮಿ ಪಕ್ಷದ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ.
ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ 6 ತಿಂಗಳು ಜೈಲಿನಲ್ಲಿದ್ದ ಅರವಿಂದ್ ಕೇಜ್ರಿವಾಲ್ ಇದೇ ಸೆ.13ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜೈಲಿಂದ ಬಿಡುಗಡೆ ಬಳಿಕ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.