More

    ಅಬಕಾರಿ ನೀತಿ ಪ್ರಕರಣ: ಮೂರನೇ ಬಾರಿಯೂ ಇಡಿ ವಿಚಾರಣೆಗೆ ಕೇಜ್ರಿವಾಲ್ ಗೈರು!

    ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಇಡಿ(ಜಾರಿ ನಿರ್ದೇಶನಾಲಯ) ನೀಡಿರುವ ಮೂರನೇ ಸಮನ್ಸ್‌ಗೆ ಲಿಖಿತ ಉತ್ತರ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಗೈರಾಗಿದ್ದು, ನೋಟಿಸ್ ಕಾನೂನುಬಾಹಿರ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ರಕ್ತಪರೀಕ್ಷೆಯಿಲ್ಲದೇ ಮಧುಮೇಹ ಪತ್ತೆಹಚ್ಚುವ ಸಾಧನ ಆವಿಷ್ಕರಿಸಿದ ಭಾರತೀಯ ವಿಜ್ಞಾನಿ! ವಿವರ ಇಲ್ಲಿದೆ ನೋಡಿ..
    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ(ಜ.3) ಜಾರಿ ನಿರ್ದೇಶನಾಲಯದ ಮೂರನೇ ಸಮನ್ಸ್ ಗೆ ಇಡಿ ಕಚೇರಿಯಲ್ಲಿ ಹಾಜರಾಗಬೇಕಿತ್ತು.
    ಇಡಿ ವಿಚಾರಣೆಗೆ ಸಹಕರಿಸಲು ಸಿದ್ಧ, ಆದರೆ ಇದು “ಕಾನೂನುಬಾಹಿರ” ಎಂದು ಕೇಜ್ರಿವಾಲ್​ ಹೇಳಿದ್ದಾರೆ.

    ತನಿಖಾ ಸಂಸ್ಥೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಲು ಕೇಜ್ರಿವಾಲ್ ಸಿದ್ಧರಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಪ್ರತಿಪಾದಿಸಿದೆ. ಆದರೆ, ಅವರನ್ನು ಬಂಧಿಸಲು ಸಮನ್ಸ್ ಕಳುಹಿಸಲಾಗಿದೆ ಎಂದು ಹೇಳಿಕೊಂಡಿದೆ.

    ‘ಲೋಕಸಭಾ ಚುನಾವಣೆಗೂ ಮುನ್ನವೇ ನೋಟಿಸ್ ಕಳುಹಿಸಿದ್ದು ಏಕೆ? ಕೇಜ್ರಿವಾಲ್ ಅವರನ್ನು ಚುನಾವಣಾ ಪ್ರಚಾರದಿಂದ ತಡೆಯುವ ಪ್ರಯತ್ನವೇ ಈ ನೋಟೀಸ್’ ಎಂದು ಎಎಪಿ ಆರೋಪಿಸಿದೆ.
    ಅಬಕಾರಿ ನೀತಿಗೆ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆದಿತ್ತು.

    ನವೆಂಬರ್ 2 ಮತ್ತು ಡಿಸೆಂಬರ್ 21 ರಂದು ನೀಡಿದ್ದ ಎರಡು ಸಮನ್ಸ್‌ಗಳನ್ನು ಧಿಕ್ಕರಿಸಿದ್ದ ಅರವಿಂದ ಕೇಜ್ರಿವಾಲ್ ಅವರು ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗಿರಲಿಲ್ಲ. ಕೇಜ್ರಿವಾಲ್‌ಗೆ ಇದು ಮೂರನೇ ಇಡಿ ನೋಟಿಸ್ ಆಗಿದೆ.

    ಮೊಬೈಲ್​ಗಾಗಿ ಕರೆಂಟ್​ ಲೆಕ್ಕಿಸದೆ ನಮ್ಮಮೆಟ್ರೊ ಹಳಿಗೆ ಹಾರಿದ ಮಹಿಳೆ.. ಮುಂದೆನಾಯ್ತು?

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts