More

    ಅಬಕಾರಿ ನೀತಿಯಲ್ಲಿ ಅಕ್ರಮ; ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ಗೆ ಸಿಬಿಐ ಸಮನ್ಸ್​

    ನವದೆಹಲಿ: 2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್​ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.

    ಸುದ್ದಿ ಮೂಲಗಳ ಪ್ರಕಾರ ಭಾನುವಾರದಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್​ಗೆ ನೀಡಿರುವ ಸಮನ್ಸ್​ನಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.

    ಅರವಿಂದ್​ ಪಾತ್ರದ ಕುರಿತು ಶಂಕೆ

    ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೊಡಿಯಾ ಅವರನ್ನು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯವು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

    kejriwal

    ಇದನ್ನೂ ಓದಿ: ಪ್ರತಿಪಕ್ಷ ಕಾಂಗ್ರೆಸ್​​ನಲ್ಲಿ 60 ಕ್ಷೇತ್ರಕ್ಕೆ ಅಭ್ಯರ್ಥಿಗಳಿಲ್ಲ: ಸಿಎಂ ಬೊಮ್ಮಾಯಿ ಲೇವಡಿ

    ಇನ್ನು ವಿಚಾರಣೆ ವೇಳೆ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಪಾತ್ರ ಇರುವ ಬಗ್ಗೆ ಸಾಕ್ಷ್ಯಾಧಾರಗಳು ದೊರೆತ್ತಿರುವ ಕಾರಣ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ ಜಾರಿ ಮಾಡಲಾಗಿದೆ ಎಂದು ಉನ್ನತ ಸುದ್ದಿ ಮೂಲಗಳು ತಿಳಿಸಿವೆ.

    ದ್ವೇಷ ರಾಜಕಾರಣಕ್ಕೆ ನಾವು ಹೆದರುವುದಿಲ್ಲ

    ಇನ್ನು ಅರವಿಂದ್​ ಕೇಜ್ರಿವಾಲ್​ಗೆ ಸಿಬಿಐ ಸಮನ್ಸ್​ ಜಾರಿ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಎಎಪಿ ನಾಯಕ ಸಂಜಯ್​ ಸಿಂಗ್​ ದೆಹಲಿ ಸರ್ಕಾರ ಜಅರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಇದು ಕೇಂದ್ರ ಸರ್ಕಾರ ನಡೆಸುತ್ತಿರುವ ದ್ವೇಷ ರಾಜಕಾರಣದ ಫಲ.

    ಈ ರೀತಿ ಆರೋಪ ಮಾಡುವುದು ಅಥವಾ ನಮ್ಮ ನಾಯಕರನ್ನು ಬಂಧಿಸುವುದರಿಂದ ಎಎಪಿ ಕಾರ್ಯಕರ್ತರು ಕುಗ್ಗುವುದಿಲ್ಲ. ಭ್ರಷ್ಟಾಚಾರದ ವಿರುದ್ಧದ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಸಂಜಯ್​ ಸಿಂಗ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts