More

    ಬಿಜೆಪಿ ಸೇರಿದ ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಲವ್ಲಿ!

    ನವದೆಹಲಿ: ಕಾಂಗ್ರೆಸ್ ಪಕ್ಷದ ದೆಹಲಿಯ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಶನಿವಾರ ಬಿಜೆಪಿಗೆ ಸೇರ್ಪಡೆಯಾದರು.

    ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಹೆಚ್​ಡಿ ರೇವಣ್ಣ ಬಂಧನ!  

    ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ದೆಹಲಿಯ ಮಾಜಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಲವ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

    ಅರವಿಂದ್ ಲವ್ಲಿ ಜೊತೆಗೆ ನಾಲ್ವರು ಮಾಜಿ ಕಾಂಗ್ರೆಸ್ ನಾಯಕರಾದ, ಮಾಜಿ ಶಾಸಕರಾದ ರಾಜ್ ಕುಮಾರ್ ಚೌಹಾಣ್, ನಸೀಬ್ ಸಿಂಗ್ ಮತ್ತು ನೀರಜ್ ಬಸೋಯಾ ಮತ್ತು ಮಾಜಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಮಲ್ಲಿಕ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಅರವಿಂದರ್ ಅವರು 2024ರ ಲೋಕಸಭೆ ಚುನಾವಣೆಗೆ ಎಎಪಿ ಜೊತೆಗಿನ ಮೈತ್ರಿಯೇ ತಮ್ಮ ರಾಜೀನಾಮೆಯ ಹಿಂದಿನ ಕಾರಣ ಎಂದು ಬರೆದಿದ್ದಾರೆ.

    ಪಕ್ಷದ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರ ಆರೋಪಗಳನ್ನು ಹೊರಿಸಿರುವ ಪಕ್ಷದ ಜತೆಗಿನ ಮೈತ್ರಿಯನ್ನು ದೆಹಲಿ ಕಾಂಗ್ರೆಸ್ ಘಟಕ ವಿರೋಧಿಸಿತ್ತು. ಈ ವಿರೋಧದ ನಡುವೆಯೂ ಪಕ್ಷವು ದೆಹಲಿಯಲ್ಲಿ ಎಎಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಯಿತು. ಇದರಿಂದ ನಾನು ಕಾಂಗ್ರೆಸ್​ ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ.

    ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಹೆಚ್​ಡಿ ರೇವಣ್ಣ ಬಂಧನ!  

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts