More

    ಮಾರ್ಗಸೂಚಿಯಂತೆ ಬಕ್ರೀದ್ ಆಚರಿಸಿ

    ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿ ಪ್ರಕಾರ ಮುಸ್ಲಿಂ ಸಮುದಾಯದವರು ಹಬ್ಬವನ್ನು ಆಚರಿಸಬೇಕು. ಶಾಂತಿಯಿಂದ ಹಬ್ಬ ಆಚರಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ತಿಳಿಸಿದ್ದಾರೆ.

    ಆಗಸ್ಟ್ 1 ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಮಿತ್ತ ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಸೀದಿ ಹೊರತುಪಡಿಸಿ ಬೇರೆ ಸ್ಥಳಗಳಲ್ಲಿ ಸಾಮೂಹಿಕವಾಗಿ ಪ್ರಾರ್ಥನೆಯನ್ನು ನಿರ್ಬಂಧಿಸಲಾಗಿದೆ. ಬಕ್ರೀದ್ ಹಬ್ಬದಂದು ಮಸೀದಿಗಳಲ್ಲಿ 50ಕ್ಕಿಂತ ಹೆಚ್ಚು ಜನ ಸೇರಿ ಪ್ರಾರ್ಥನೆ ಸಲ್ಲಿಸುವಂತಿಲ್ಲ ಎಂದರು.

    ಹೆಚ್ಚು ಜನರು ಬರುವ ಮಸೀದಿಗಳಲ್ಲಿ ಟೋಕನ್ ವ್ಯವಸ್ಥೆ ಮಾಡಿಕೊಳ್ಳುವುದು ಉತ್ತಮ. ಜನರ ಆರೋಗ್ಯ ದೃಷ್ಟಿಯಿಂದ ಮಕ್ಕಳು, ಹಿರಿಯರು ಮನೆಯಿಂದ ಮಸೀದಿಗಳಿಗೆ ತೆರಳದಂತೆ ನೋಡಿಕೊಳ್ಳಬೇಕು. ಮನೆಯಲ್ಲೇ ಪ್ರಾರ್ಥನೆ ಮಾಡಲು ಮನವಿ ಮಾಡಿಕೊಳ್ಳಬೇಕು ಎಂದು ಧಾರ್ಮಿಕ ಮುಖಂಡರಿಗೆ ಜಿಲ್ಲಾಧಿಕಾರಿ ಸಲಹೆ ನೀಡಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಸರ್ಕಾರದ ಮಾರ್ಗಸೂಚಿಯನ್ನು ಧರ್ಮಗುರುಗಳ ಮೂಲಕ ಪ್ರಚಾರ ಮಾಡಿ, ಮುಸ್ಲಿಂ ಸಮುದಾಯದವರಿಗೆ ತಲುಪುವಂತೆ ನೋಡಿಕೊಳ್ಳಬೇಕು. ಪ್ರಾರ್ಥನೆ ಮಾಡುವ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು. ಕಂಟೇನ್ಮೆಂಟ್ ಜೋನ್‌ಗಳ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಕರೊನಾ ಲಕ್ಷಣವಿದ್ದವರು ಮಸೀದಿಗೆ ಬಾರದಂತೆ ನೋಡಿಕೊಳ್ಳಬೇಕು. 50 ಜನರ ಪ್ರತಿ ಬ್ಯಾಚ್ ಮಾಡಿಕೊಂಡು ಪ್ರಾಥರ್ನೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು.

    ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿಧರ ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಬಿ.ಎನ್. ತುಕ್ಕಾರ, ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ ಇತರ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts