'ಮನುಕುಲದ ಹಿತಾಸಕ್ತಿಯೇ ಭಾರತದ ಆದ್ಯತೆ..ಕರೊನಾ ವಿರುದ್ಧ ಹೋರಾಟದಲ್ಲಿ ಎಲ್ಲರಿಗೂ ಸಹಾಯ ಮಾಡುತ್ತೇವೆ'

Narendra Modi 26
Published on

ನವದೆಹಲಿ: ಕೋವಿಡ್​-19 ವಿರುದ್ಧದ ಹೋರಾಟದಲ್ಲಿ ಭಾರತ ಸಕ್ರಿಯವಾಗಿದ್ದು, ಲಸಿಕೆ ಉತ್ಪಾದನೆಯಲ್ಲಿ ವಿಶ್ವದ ಅತಿದೊಡ್ಡ ದೇಶಗಳ ಸಾಲಿನಲ್ಲಿ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು.

ಇಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಇಡೀ ಜಗತ್ತಿಗೆ ಪೂರೈಕೆ ಮಾಡುವಷ್ಟು ಕೊವಿಡ್​-19 ಲಸಿಕೆ ಉತ್ಪಾದನೆ ಮಾಡುವ ಸಾಮರ್ಥ್ಯ ಭಾರತಕ್ಕೆ ಇದೆ. ಇಡೀ ಮನುಕುಲವನ್ನು ಕರೊನಾದಿಂದ ಕಾಪಾಡುವ ನಿಟ್ಟಿನಲ್ಲಿ ನಮ್ಮ ದೇಶ ಹೋರಾಟ ನಡೆಸುತ್ತಿದೆ ಎಂದು ಮೋದಿ ಹೇಳಿದರು. ಇದನ್ನೂ ಓದಿ: ನಟ ಶರಣ್​ ಆಸ್ಪತ್ರೆಗೆ ದಾಖಲು, ಅಣ್ಣನ ಆರೋಗ್ಯದ ಬಗ್ಗೆ ತಂಗಿ ಶ್ರುತಿ ಹೇಳಿದ್ದೇನು?

ಭಾರತ ಯಾವಾಗಲೂ ಇಡೀ ಮನುಕುಲದ ಹಿತಾಸಕ್ತಿಯ ಬಗ್ಗೆ ಯೋಚಿಸುತ್ತದೆ. ಜನರ ಒಳಿತಿನ ತತ್ವಗಳನ್ನು ಆಧರಿಸಿಯೇ ನಾವು ನೀತಿ ರೂಪಿಸುತ್ತೇವೆ ಹೊರತು ಪಟ್ಟಭದ್ರ ಹಿತಾಸಕ್ತಿಗಳಿಗಾಗಿ ಅಲ್ಲ. ಈ ಸಾಂಕ್ರಾಮಿಕ ಸಂದರ್ಭದಲ್ಲಿ ನಾವು 150ಕ್ಕೂ ಹೆಚ್ಚು ದೇಶಗಳಿಗೆ ಅಗತ್ಯ ಔಷಧಿಗಳನ್ನು ಕಳಿಸಿದ್ದೇವೆ ಎಂದು ತಿಳಿಸಿದರು.

ಕರೊನಾ ಕಾರಣದಿಂದ ಈ ಬಾರಿ ವಿಶ್ವ ಸಂಸ್ಥೆ ಸಾಮಾನ್ಯ ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಿತು. ಇದರಲ್ಲಿ ಮಾತನಾಡಿದ ಮೋದಿಯವರು ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಇನ್ನಷ್ಟು ಹೆಚ್ಚಿನ ಮಹತ್ವ ಸಿಗಬೇಕು ಎಂದು ಒತ್ತಾಯಿಸಿದರು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net