

ಕುಂದಾಪುರ: ಅಂಪಾರಿನ ಸಂಜಯ ಗಾಂಧಿ ಆಂಗ್ಲ ವಾಧ್ಯಮ ಶಾಲೆಯಲ್ಲಿ ಸೋಮವಾರ ‘ಆಸಾಡಿ ತೊಡು’ ಕಾರ್ಯಕ್ರಮ ನಡೆಯಿತು.
ಸಂಜಯಗಾಂಧಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಸಂತೋಷ್ಕುವಾರ್ ಶೆಟ್ಟಿ ಬಲಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಟ್ರಸ್ಟ್ನ ಖಜಾಂಚಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ಮತ್ತು ನಿರ್ದೇಶಕ ಉಮೇಶ್ ಕೊಠಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 80ಕ್ಕೂ ಹೆಚ್ಚು ಸಾಂಪ್ರದಾಯಿಕ, ಅಪರೂಪದ ಮಳೆಗಾಲದ ತಿಂಡಿ ತಿನಿಸುಗಳನ್ನು ಪರಿಚಯಿಸಲಾಯಿತು. ಸಂಸ್ಥೆ ಆಡಳಿತಾಧಿಕಾರಿ ಚೈತ್ರಾ ಯಡಿಯಾಳ, ಮುಖ್ಯಶಿಕ್ಷಕ, ಶಿಕ್ಷಕ, ಶಿಕ್ಷಕಿಯರು, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.