ನವದೆಹಲಿ: ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಹಿಂಸಾಚಾರವು ರಾಜ್ಯದ ಭದ್ರತೆ ಮತ್ತು ಆಡಳಿತದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸೋಮವಾರ (ಮಾರ್ಚ್ 17) ಸಂಜೆ ಮಹಲ್ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿತ್ತು. ಈ ಸಮಯದಲ್ಲಿ ಗಲಭೆಕೋರರು ಅನೇಕ ವಾಹನಗಳಿಗೆ ಬೆಂಕಿ ಹಚ್ಚಿದರು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು ಮತ್ತು ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದರು.( Asaduddin Owaisi)
ಇದನ್ನು ಓದಿ: ಗಾಜಾದಲ್ಲಿ ಇಸ್ರೇಲ್ ನಡೆಸಿದ ಅತಿದೊಡ್ಡ ವೈಮಾನಿಕ ದಾಳಿ; 300ಕ್ಕೂ ಹೆಚ್ಚು ಮಂದಿ ಮೃತ | Israeli Airstrike
ಕಲ್ಲು ತೂರಾಟದಲ್ಲಿ ಡಿಸಿಪಿ ಸೇರಿದಂತೆ ಹಲವು ಪೊಲೀಸರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಮಾಹಿತಿಯ ಪ್ರಕಾರ, ಈ ಪ್ರಕರಣದಲ್ಲಿ ಪೊಲೀಸರು 40 ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಸದ್ಯ ಈ ವಿಚಾರಕ್ಕೆ ಸಂಬಂಧಿಸಿದಂಥೆ ಅಸಾದುದ್ದೀನ್ ಓವೈಸಿ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ್ದಾರೆ.
ಈ ಘಟನೆ ರಾಜ್ಯ ಸರ್ಕಾರದ ವೈಫಲ್ಯದ ಪರಿಣಾಮವಾಗಿದೆ ಎಂದು ಓವೈಸಿ ಹೇಳಿದರು. ಕಳೆದ ಕೆಲವು ದಿನಗಳಿಂದ ವಾತಾವರಣವನ್ನು ಹಾಳು ಮಾಡಲು ಉದ್ದೇಶಪೂರ್ವಕ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು. ಧಾರ್ಮಿಕ ಗ್ರಂಥಗಳನ್ನು ಸುಟ್ಟಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು, ಆದರೆ ಸರ್ಕಾರ ಅದರ ಬಗ್ಗೆ ಯಾವುದೇ ಕ್ರಮಕೈಗೊಳ್ಳಲಿಲ್ಲ ಎಂದು ಹೇಳಿದರು. ಈ ಹಿಂಸಾಚಾರವನ್ನು ಉದ್ದೇಶಪೂರ್ವಕವಾಗಿ ಮಾಡಲಾಗಿದೆ ಮತ್ತು ಕೆಲವು ನಿರ್ದಿಷ್ಟ ವ್ಯಕ್ತಿಗಳು ಇದರ ಹಿಂದೆ ಒಂದು ಉದ್ದೇಶವನ್ನು ಹೊಂದಿದ್ದರು ಎಂದು ಓವೈಸಿ ತಿಳಿಸಿದರು.
ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರು ಇಬ್ಬರೂ ನಾಗ್ಪುರದಿಂದ ಬಂದವರು. ಈ ಹಿಂಸಾಚಾರದ ನಂತರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಘಟನೆ ಅತ್ಯಂತ ದುಃಖಕರ ಆದರೆ ಇದರ ಹಿಂದಿನ ಪಿತೂರಿಯನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಮಹಾರಾಷ್ಟ್ರ ಸರ್ಕಾರದಿಂದ ಕ್ರಮದ ಭರವಸೆಯನ್ನು ಓವೈಸಿ ವ್ಯಕ್ತಪಡಿಸಿದ್ದು, ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.(ಏಜೆನ್ಸೀಸ್)
#WATCH | Delhi: On Nagpur violence, AIMIM Chief Asaduddin Owaisi says, “In last few weeks, the statements which the CM and other ministers of Maharashtra government are giving, that need to be seen. The biggest provocative statements are coming from the government… They don’t… pic.twitter.com/Wup1gDBpn8
— ANI (@ANI) March 18, 2025