More

    ಸಿಎಎ ಜಾರಿಗೆ ತಡೆ ನೀಡಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸಾದುದ್ದೀನ್ ಓವೈಸಿ

    ಹೈದರಾಬಾದ್: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಶನಿವಾರ ಸುಪ್ರೀಂ ಕೋರ್ಟ್‌ ಅರ್ಜಿ ಸಲ್ಲಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

    ಇದನ್ನೂ ಓದಿ: ಹಸೆಮಣೆ ಏರಿದ ವಿಕ್ಟರಿ ವೆಂಕಟೇಶ್ ಪುತ್ರಿ .. ಬಂದ ಹೀರೋಗಳು ಯಾರು ಗೊತ್ತಾ?

    ಮುಸ್ಲಿಂ ಸಮುದಾಯದ ಸಾಕಷ್ಟು ವಿರೋಧದಿಂದ ಕಳೆದ ನಾಲ್ಕೈದು ವರ್ಷಗಳಿಂದ ಜಾರಿಯಾಗದೆ ಬಾಕಿ ಉಳಿದಿದ್ದ ಈ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡುವ ಮೂಲಕ ಲೋಕಸಭೆ ಚುನಾವಣೆಯ ಪ್ರಮುಖ ಅಸ್ತ್ರವಾಗಿಸಿಕೊಂಡಿದೆ ಎಂದು ಆರೋಪಿಸಲಾಗಿದೆ.

    ಪೌರತ್ವ (ತಿದ್ದುಪಡಿ) ಸ್ಥಿತಿಯನ್ನು ನಿಯಮಗಳು-2024 ಹೆಸರಿನ ಈನಿಯಮಗಳು, ಸಿಎಎ-2019 ಕಾಯ್ದೆಯ ಪ್ರಕಾರ ಅರ್ಹರಾದವರಿಗೆ ಭಾರತೀಯ ಪೌರತ್ವ ನೀಡಲು ಅವಕಾಶ ಕಲ್ಲಿಸಲಿವೆ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರೊಬ್ಬರು ತಿಳಿಸಿದರು.

    ಏನಿದು ಸಿಎಎ?: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ವಿದೇಶಿ ಅಕ್ರಮ ವಲಸಿಗರಿಗೆ ಭಾರತದ ಪೌರತ್ವ ನೀಡಲು ಈ ಕಾಯ್ದೆ ಅವಕಾಶ ಮಾಡಿಕೊಡುತ್ತದೆ. ಭಾರತದ ನೆರೆ ರಾಷ್ಟ್ರಗಳಾದ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿರುವ ಮುಸ್ಲಿಮೇತರರಿಗೆ ಧರ್ಮದ ಆಧಾರದಲ್ಲಿ ಪೌರತ್ವ ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೂ ಮುನ್ನ ಈ ಮೂರು ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿರುವ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರೈಸ್ತ ಧರ್ಮೀಯರಿಗೆ ಮಾತ್ರ ಇದರ ಅನುಕೂಲ ದೊರೆಯಲಿದೆ.

    ಜತೆಗೆ ಅಕ್ರಮ ವಲಸಿಗರ ವಿರುದ್ಧ ದಾಖಲಾಗಿರುವ ಪ್ರಕರಣಗಳು ರದ್ದಾಗುತ್ತವೆ. ಪೌರತ್ವಕ್ಕೆ ಅರ್ಜಿ ಸಲ್ಲಿಸಿದ ತಕ್ಷಣವೇ ಈ ಜನರಿಗೆ ಭಾರತದ ಪ್ರಜೆಗೆ ದೊರೆಯುವ ಎಲ್ಲಾ ಹಕ್ಕುಗಳು ಮತ್ತು ಸವಲತ್ತುಗಳು ಕೂಡ ದೊರೆಯುತ್ತವೆ. ಅಸ್ಸಾಂ ಎನ್‌ಆರ್‌ಸಿಯಿಂದ ಹೊರಗೆ ಇಡಲಾದ ಹಿಂದೂಗಳು, ಬೌದ್ಧ, ಕ್ರೈಸ್ತ, ಜೈನ ಧರ್ಮೀಯರಿಗೆ ಕೂಡ ಪೌರತ್ವ ದೊರೆಯಲಿದೆ. ಆದರೆ, ಈ ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿರುವ ಮುಸ್ಲಿಮರಿಗೆ ಭಾರತದ ಪೌರತ್ವ ದೊರೆಯುವುದಿಲ್ಲ.

    ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧೆ! ಬಿಎಸ್​ವೈ ವಿರುದ್ಧ ವಾಗ್ದಾಳಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts