More

    ಆಶಾ ಕಾರ್ಯಕರ್ತೆಯರ ಪ್ರತಿಭಟನೆ

    ಮೈಸೂರು: ಆಶಾ ಕಾರ್ಯಕರ್ತರ ಸಮಸ್ಯೆಗಳನ್ನು ಪರಿಹರಿಸಬೇಕು ಹಾಗೂ ಅವರ ಮೇಲಾಗುತ್ತಿರುವ ಹಲ್ಲೆಗಳನ್ನು ತಪ್ಪಿಸಿ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

    ಕರೊನಾ ಮುಕ್ತ ಕರ್ನಾಟಕಕ್ಕೆ ಆಶಾ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿದ್ದಾರೆ. ಮನೆ ಮನೆಗಳಿಗೆ ತೆರಳಿ ಜನರ ಆರೋಗ್ಯವನ್ನು ವಿಚಾರಿಸುತ್ತಿರುವ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಇದು ಆಶಾ ಕಾರ್ಯಕರ್ತೆಯರಲ್ಲಿ ಆತಂಕ ಮೂಡಿಸಿದ್ದು, ಅವರಿಗೆ ಸೂಕ್ತ ರಕ್ಷಣೆ ಒದಗಿಸಲು ಸರ್ಕಾರ ಕ್ರಮ ವಹಿಸಬೇಕು. ಹಲ್ಲೆ ನಡೆಸಿದವರನ್ನು ಗುರುತಿಸಿ ಅವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಇಲ್ಲವಾದಲ್ಲಿ ಇಂಥ ಘಟನೆಗಳು ಮರುಕಳಿಸುವ ಸಾಧ್ಯತೆ ಹೆಚ್ಚಿದೆ ಎಂದು ಸಂಘದ ನಗರಾಧ್ಯಕ್ಷೆ ಜಿ.ಎಸ್.ಸೀಮಾ ಕಳವಳ ವ್ಯಕ್ತಪಡಿಸಿದರು.

    ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಪರಿಹಾರ ನೀಡಬೇಕು. ಮಾರ್ಚ್‌ನಿಂದ ಅನ್ವಯ ಆಗುವಂತೆ ಕರೊನಾ ನಿರ್ಮೂಲನೆ ಆಗುವವರೆಗೆ ಮಾಸಿಕ 10 ಸಾವಿರ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಅಗತ್ಯವಿರುವಷ್ಟು ಮಾಸ್ಕ್ ಹಾಗೂ ಸ್ಯಾನಿಟೈಸರ್, ಗ್ಲೌಸ್‌ಗಳನ್ನು ನೀಡಬೇಕು. ಕರೊನಾದಿಂದ ಆಶಾ ಕಾರ್ಯಕರ್ತೆಯರು ಮೃತಪಟ್ಟರೆ ಅವರ ಕುಟುಂಬಕ್ಕೆ 50 ಲಕ್ಷ ರೂ. ವಿಮೆ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿದರು.
    ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳಾದ ಸುನೀತಾ, ಕೋಮಲಾ, ವೀಣಾ ಕುಮಾರಿ, ಸಂಧ್ಯಾ, ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts