More

    13ಕ್ಕೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

    ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ 15 ಸಾವಿರ ರೂ. ಮಾಸಿಕ ವೇತನ ನಿಗದಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ನಗರದ ಸ್ವಾತಂತ್ರ ಉದ್ಯಾನದಲ್ಲಿ ಫೆ. 13 ಮತ್ತು 14ರಂದು ವಿಧಾನಸೌಧ ಚಲೋ ಹಮ್ಮಿಕೊಂಡಿದೆ.


    ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸಿಗದೇ ಆಗುತ್ತಿರುವ ವಂಚನೆ ತಡೆಗೆ ಆರ್.ಸಿ.ಎಚ್. ಪೋರ್ಟಲ್ ಅನ್ನು ವೇತನ ಪಾವತಿ ಪ್ರಕ್ರಿಯೆಯಿಂದ ಡೀಲಿಂಕ್ ಮಾಡಬೇಕು. ಒತ್ತಾಯಪೂರ್ವಕ ಮೊಬೈಲ್ ಕೆಲಸಗಳನ್ನು ಕೈಬಿಟ್ಟು, ಮೊಬೈಲ್ ಬಳಕೆ ಬಾರದವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಮೊಬೈಲ್ ಡಾಟಾ ಒದಗಿಸಿ, ಅದರಲ್ಲಿ ಕೆಲಸ ಮಾಡುವವರಿಗೆ ಪ್ರೋತ್ಸಾಹಧನ ನಿಗದಿ ಪಡಿಸಬೇಕು. ಹಲವು ವರ್ಷಗಳಿಂದ ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ತಿಳಿಸಿದ್ದಾರೆ.


    ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ, ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 20 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆರು ಪಾಲ್ಗೊಳ್ಳಲಿದ್ದಾರೆ. ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts