ಐಪಿಎಲ್​​ಗೆ​ ರೀ ಎಂಟ್ರಿ ಕೊಡಲು ಸಜ್ಜಾದ ಸಿಕ್ಸರ್​ ಕಿಂಗ್​; ಯಾವ ತಂಡ ಇಲ್ಲಿದೆ ಕಂಪ್ಲೀಟ್​ ಡೀಟೇಲ್ಸ್​

yuvraj singh

ಅಹಮದಾಬಾದ್: 18ನೇ ಆವೃತ್ತಿಯ ಐಪಿಎಲ್​ ಶುರುವಾಗುವುದಕ್ಕೆ ಇನ್ನೂ ತುಂಬಾ ದಿನಗಳು ಬಾಕಿ ಉಳಿದಿದ್ದು, ಅದಕ್ಕೆ ಸಂಬಂಧಿಸಿದ ಸುದ್ದಿಗಳು ಕ್ರೀಡಾ ವಲಯದಲ್ಲಿ ವ್ಯಾಪಕ ಸದ್ದು ಮಾಡುತ್ತಿವೆ. ಇದೀಗ ಟೀಮ್​ ಇಂಡಿಯಾಗೆ ಎರಡು ವಿಶ್ವಕಪ್​ ಗೆಲ್ಲಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆಲ್ರೌಂಡರ್, ಸಿಕ್ಸರ್​ ಕಿಂಗ್​ ಎಂದೇ ಹೆಸರುವಾಸಿಯಾಗಿರುವ​ ಯುವರಾಜ್​ ಸಿಂಗ್​ 18ನೇ ಆವೃತ್ತಿಯ ಐಪಿಎಲ್​ನಲ್ಲಿ ಕಮ್​ಬ್ಯಾಕ್​ ಮಾಡಲಿದ್ದಾರೆ ಎಂಬ ಸುದ್ದಿ ಸದ್ದು ಮಾಡುತ್ತಿದ್ದು, ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಸದ್ಯು ಕೇಳಿ ಬಂದಿರುವ ಮಾಹಿತಿ ಪ್ರಕಾರ ಟೀಮ್​ ಇಂಡಿಯಾ ಮಾಜಿ ಆಲ್ರೌಂಡರ್​ ಯುವರಾಜ್​ ಸಿಂಗ್​ ಐಪಿಎಲ್​ನ ಯಶಸ್ವಿ ಫ್ರಾಂವೈಸಿಗಳಲ್ಲಿ ಒಂದಾದ ಗುಜರಾತ್​ ಟೈಟಾನ್ಸ್​ ತಂಡದ ಮುಖ್ಯ ಕೋಚ್​ ಆಗಿ ಐಪಿಎಲ್​ಗೆ ಕಮ್​ಬ್ಯಾಕ್​ ಮಾಡಲಿದ್ದಾರೆ ಎಂಬ ಸುದ್ದಿ ಕ್ರೀಡಾ ವಲಯದಲ್ಲಿ ಹರಿದಾಡುತ್ತಿದೆ. 2025ರಲ್ಲಿ ನಡೆಯುವ ಐಪಿಎಲ್​ ಮೆಗಾ ಹರಾಜಿಗೂ ಅವರು ತಂಡದ ಕೋಚ್​ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಜನರ ನಡುವೆಯೇ ಜಾತ್ರೆಯಲ್ಲಿ ಕಿಸ್​ ಮಾಡಿದ ಪ್ರೇಮಿಗಳು; ಲಿಪ್​ಲಾಕ್​ ವಿಡಿಯೋ ವೈರಲ್​

ಗುಜರಾತ್ ಟೈಟಾನ್ಸ್ ತಂಡದ ಹಾಲಿ ಕೋಚ್ ಆಗಿರುವ ಆಶಿಶ್ ನೆಹ್ರಾ ಮತ್ತು ನಿರ್ದೇಶಕ ವಿಕ್ರಮ್ ಸೋಲಂಕಿ ತಂಡವನ್ನು ತೊರೆಯಬಹುದು ಎಂದು ಹೇಳಲಾಗುತ್ತಿದೆ. 2025 ರ ಐಪಿಎಲ್​ನ ಮೆಗಾ ಹರಾಜಿಗೂ ಮೊದಲು ಈ ಇಬ್ಬರು ತಂಡವನ್ನು ತೊರೆಯಬಹುದು ಎನ್ನಲಾಗಿದೆ. ವರದಿಗಳ ಪ್ರಕಾರ ಇದೀಗ ಗುಜರಾತ್ ಟೈಟಾನ್ಸ್ ಮ್ಯಾನೇಜ್ ಮೆಂಟ್ ಯುವರಾಜ್ ಸಿಂಗ್​ರನ್ನು ಸಂಪರ್ಕಿಸಿದ್ದು, ಒಂದು ಸುತ್ತಿನ ಮಾತುಕತೆ ನಡೆಸಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಐಪಿಎಲ್​ನಲ್ಲಿ ಆಡಿದ ಸುದೀರ್ಘ ಅನುಭವವನ್ನು ಹೊಂದಿರುವ ಯುವರಾಜ್​ ಸಿಂಗ್​ ಪಂಜಾಬ್, ಹೈದರಾಬಾದ್, ಪುಣೆ ವಾರಿಯರ್ಸ್, ಆರ್‌ಸಿಬಿ, ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳಲ್ಲಿ ಆಡಿದ್ದಾರೆ. ಒಂದು ವೇಳೆ ಯುವರಾಜ್ ಸಿಂಗ್ ಗುಜರಾತ್ ಟೈಟಾನ್ಸ್ ತಂಡದ ಮುಖ್ಯ ಕೋಚ್‌ ಆದರೆ ಅವರಿಗೆ ಭಾರಿ ಮೊತ್ತದ ಸಂಭಾವನೆ ಸಿಗುವ ಸಾಧ್ಯತೆಗಳಿವೆ. ವರದಿಗಳ ಪ್ರಕಾರ, ಗುಜರಾತ್ ಟೈಟಾನ್ಸ್ ಪ್ರತಿ ಸೀಸನ್​ಗೆ ಹಾಲಿ ಕೋಚ್ ಆಶಿಶ್ ನೆಹ್ರಾಗೆ 3.5 ಕೋಟಿ ರೂ. ಸಂಭಾವನೆ ನೀಡುತ್ತಿದೆ. ಇದೀಗ ಯುವರಾಜ್‌ ಈ ಸ್ಥಾನಕ್ಕೆ ಬಂದರೆ ಅವರ ವೇತನದ ಡಬಲ್​ ಆಗಬಹುದು ಎಂದು ಅಂದಾಜಿಸಲಾಗಿದೆ.

Share This Article

ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ಚೆಕ್​ ಮಾಡಿ ನೋಡಿ… ಇದ್ರೆ ನೀವು ರಾಜಯೋಗ ಅನುಭವಿಸುತ್ತೀರಿ!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

ನಿಮ್ಮ ಮನೆಯಲ್ಲಿ ಮರಿ ಹಲ್ಲಿ ಇದ್ರೆ ಈ ಒಂದು ತಪ್ಪು ಮಾತ್ರ ಮಾಡ್ಬೇಡಿ: ಮಾಡಿದ್ರೆ ಈ ಗಂಡಾಂತರ ಫಿಕ್ಸ್!

ಸಾಮಾನ್ಯವಾಗಿ ಹಿಂದು ಪುರಾಣದಲ್ಲಿ ಹಲ್ಲಿಗಳನ್ನು ಅದೃಷ್ಟದ ಸಂಕೇತ ಎಂದು ಕರೆಯಲಾಗಿದೆ. ಹಲ್ಲಿಗಳು ಲೊಚಗುಡುವುದು ಶುಭ ಸೂಚನೆ…

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…