

ವಿಟ್ಲ: ಜಾತಿ, ಮತ, ಧರ್ಮ ಭೇದವಿಲ್ಲದೆ ಎಲ್ಲರನ್ನೂ ಒಂದೆ ದೃಷ್ಟಿಯಲ್ಲಿ ಕಾಣುವ ಅಶೋಕ್ ರೈ ಅವರು ಜನಪ್ರತಿನಿಧಿ ಹೇಗಿರಬೇಕು ಎಂಬುದಕ್ಕೆ ಮಾದರಿ ಎನಿಸಿದ್ದಾರೆ ಎಂದು ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ಹೇಳಿದರು.
ಶ್ರೀ ಕ್ಷೇತ್ರದಲ್ಲಿ ಭಾನುವಾರ ರಾತ್ರಿ ಅಶೋಕ ಜನಮನ-೨೦೨೫ ದೀಪಾವಳಿ ಕಾರ್ಯಕ್ರಮದ ಗ್ರಾಮ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು.
ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿದರು. ಅಳಿಕೆ ಗ್ರಾ.ಪಂ. ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಮಾಣಿಲ ಗ್ರಾಪಂ ಅಧ್ಯಕ್ಷ ಶ್ರೀಧರ್ ಮಾಣಿಲ, ಕೋಡಿಂಬಾಡಿ ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ವಿಷ್ಣುಭಟ್ ಕೆಮ್ಮುಂಜೆ, ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಸದಸ್ಯರಾದ ರಾಮಣ್ಣ ಪಿಲಿಂಜ, ಮೋಹನ್ ಗುರ್ಜಿನಡ್ಕ ಉಪಸ್ಥಿತರಿದ್ದರು. ಪ್ರವೀಣ್ ಸಣ್ಣಗುತ್ತು ಕಾರ್ಯಕ್ರಮ ನಿರೂಪಿಸಿದರು.