More

    ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಪ್ರಮುಖ ದಾಖಲೆ ಬರೆದ ಆರ್. ಅಶ್ವಿನ್; ಏನದು?

    ರಾಂಚಿ: ಇಲ್ಲಿನ ಜೆಎಸ್​ಸಿಎ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್​ ನಡುವಿನ ನಾಲ್ಕನೇ ಟೆಸ್ಟ್​ ಪಂದ್ಯ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಟೀಂ ಇಂಡಿಯಾದ ಸ್ಪಿನ್ನರ್​ ಆರ್​. ಅಶ್ವಿನ್​ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಟೀಂ ಇಂಡಿಯಾದ ಸ್ಪಿನ್ನರ್ ಆರ್. ಅಶ್ವಿನ್ ಶುಕ್ರವಾರ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಈ ಮೂಲಕ ಆಂಗ್ಲರ ವಿರುದ್ಧದ ಟೆಸ್ಟ್​ನಲ್ಲಿ 100 ವಿಕೆಟ್ ಕಿತ್ತ ಇತಿಹಾಸದ ಮೊದಲ ಭಾರತೀಯ ಬೌಲರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ಇದರ ಜೊತೆಗೆ + 1000 ಕ್ಕೂ ಅಧಿಕ ರನ್ ಕಲೆಹಾಕಿದ ಏಷ್ಯಾದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಅಶ್ವಿನ್ ಪಾತ್ರರಾಗಿದ್ದಾರೆ. 

    ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್ ವಿರುದ್ಧ 23 ಟೆಸ್ಟ್​ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 42 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ಮೂಲಕ 100 ವಿಕೆಟ್​ಗಳನ್ನು ಕಬಳಿಸಿ ಈ ವಿಶೇಷ ದಾಖಲೆ ಬರೆದಿದ್ದಾರೆ. ಇದರ ಜೊತೆಗೆ 1000ಕ್ಕೂ ಅಧಿಕ  ರನ್ ಕಲೆಹಾಕಿದ ಏಷ್ಯಾದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಅಶ್ವಿನ್ ಪಾತ್ರರಾಗಿದ್ದಾರೆ. ಅಶ್ವಿನ್ ಅವರನ್ನು ಹೊರತುಪಡಿಸಿ ಏಷ್ಯಾದ ಯಾವುದೇ ಆಟಗಾರ 1000 ರನ್​+100 ವಿಕೆಟ್ ಕಬಳಿಸಿಲ್ಲ ಎಂಬುದು ವಿಶೇಷ.

    ಇದನ್ನೂ ಓದಿ: ದೇಹ ತೂಕ ಇದ್ದರೆ ಸಾಕಾಗುವುದಿಲ್ಲ, ಮಾತಿನಲ್ಲಿ ತೂಕವಿರಬೇಕು: ನಿರ್ಮಾಪಕ ಉಮಾಪತಿ

    ಇಂಗ್ಲೆಂಡ್ ವಿರುದ್ಧ 100 ವಿಕೆಟ್ + 1000 ರನ್ ಕಲೆಹಾಕಿದ ಏಷ್ಯಾದ ಮೊದಲ ಆಟಗಾರ ಹಾಗೂ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ವೆಸ್ಟ್ ಇಂಡೀಸ್​ನ ಗ್ಯಾರಿ ಸೋಬರ್ಸ್​, ಆಸ್ಟ್ರೇಲಿಯಾದ ಮೋನಿ ನೋಬಲ್, ಜಾರ್ಜ್ ಗಿಫೆನ್ ಇಂಗ್ಲೆಂಡ್ ವಿರುದ್ಧ ಈ ಸಾಧನೆ ಮಾಡಿದ್ದರು.

    ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಜೋ ರೂಟ್ (106*) ಶತಕದ ನೆರವಿನಿಂದ ಮೊದಲ ದಿನದಾಟದ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 302 ರನ್ ಕಲೆಹಾಕಿದೆ. ಒಲೀ ರಾಬಿನ್ಸನ್ ಹಾಗೂ ಜೋ ರೂಟ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts