More

    ರಾಜ್ ಕಪ್ ಸೀಸನ್-6 ಜರ್ಸಿ ಅನಾವರಣ: ಕಾರ್ಯಕ್ರಮಕ್ಕೆ ಮೆರುಗು ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್​; ಇಲ್ಲಿದೆ ತಂಡಗಳ ವಿವರ

    ಬೆಂಗಳೂರು: ಡಾ.ರಾಜ್ ಕಪ್ ಇದೀಗ 6ನೇ ಸೀಸನ್​ಗೆ ಹೆಜ್ಜೆಯಿಟ್ಟಿದ್ದು, ಮುಹೂರ್ತ ಫಿಕ್ಸ್ ಆಗಿದೆ. ಇದಕ್ಕಾಗಿ ಚಂದನವನದ ತಾರೆಯರು ತಯಾರಿ ಆರಂಭಿದ್ದಾರೆ. ಪುನೀತ್ ರಾಜ್​ಕುಮಾರ್ ಅವರ ಸ್ಮಾರಣಾರ್ಥವಾಗಿ ರಾಜ್ ಕಪ್ ಆಯೋಜಿಸಲಾಗಿದೆ. ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ಇತ್ತೀಚೆಗೆಷ್ಟೇ ಬೆಂಗಳೂರಿನ ಜ್ಞಾನ ಜ್ಯೋತಿ ಆಡಿಟೋರಿಯಂನಲ್ಲಿ ಜರ್ಸಿ ಬಿಡುಗಡೆ ಮಾಡಲಾಗಿದ್ದು, ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾರ್ಯಕ್ರಮಕ್ಕೆ ಸಾಥ್ ಕೊಟ್ಟರು.

    ಇದನ್ನೂ ಓದಿBBKS10: ಹೆಚ್ಚಾಗ್ತಿದೆ ಕನ್ನಡ ಪದಗಳ ಬಳಕೆ; ಮೈಕಲ್​ ಪ್ರಯತ್ನಕ್ಕೆ ಸಿಕ್ತು ಕಿಚ್ಚನ ಚಪ್ಪಾಳೆ!

    ಈ ವೇಳೆ ಮಾತನಾಡಿದ ಆಯೋಜಕರಾದ ರಾಜೇಶ್ ಬ್ರಹ್ಮಾವರ, “ರಾಜ್ ಕಪ್ ಆರನೇ ಸೀಸನ್ ವಿದೇಶದಲ್ಲಿ ಮಾಡ್ತಿರುವುದು ನನಗೆ ಕಷ್ಟವಾಗುತ್ತಿಲ್ಲ. ಯಾಕಂದ್ರೆ ನನಗೆ ಚಿನ್ನದಂತಹ ಕ್ಯಾಪ್ಟನ್ಸ್, ಓನರ್ ಹಾಗೂ ಫ್ಲೇಯರ್ಸ್ ಸಿಕ್ಕಿದ್ದಾರೆ. ಎಲ್ಲವೂ ಅಚ್ಚುಕಟ್ಟಾಗಿ ನಡೆಯುತ್ತಿದೆ. ಓನರ್ ಬಂದ್ಮೇಲೆ ಅವರೇ ಟೀಂ ರೆಡಿ ಮಾಡುತ್ತಿದ್ದಾರೆ. ಮುಂದಿನ ವರ್ಷ ಎಷ್ಟು ದೇಶಗಳಲ್ಲಿ ಮಾಡುತ್ತೇನೆ ಗೊತ್ತಿಲ್ಲ. ದುಬೈನಲ್ಲಿ ಲೈವ್ ಸಿಗಲ್ಲ ಎಂದಿದ್ದರು. ಪ್ರಯತ್ನಿಸಿ ಪರ್ಮಿಷನ್ ತೆಗೆದುಕೊಂಡು ಬಂದಿದ್ದೇವೆ” ಎಂದರು.

    “ಈ ಬಾರಿಯ ಡಾ. ರಾಜ್ ಕಪ್ ಸೀಸನ್ 6 ನವೆಂಬರ್ 28 ರಿಂದ ಡಿಸೆಂಬರ್ 10 ರವರೆಗೆ ನಡೆಯಲಿದೆ. ವಿಶ್ವದ ಹಲವು ಭಾಗಗಳಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ನವೆಂಬರ್ 28 ಮತ್ತು 29 ಶ್ರೀಲಂಕಾ, ಡಿಸೆಂಬರ್ 1 ಮತ್ತು 2 ಮಲೇಷಿಯಾ, ಡಿಸೆಂಬರ್ 3 ಮತ್ತು 4ಕ್ಕೆ ಸಿಂಗಾಪುರ್, ಡಿಸೆಂಬರ್ 7 ಮತ್ತು 8ಕ್ಕೆ ಮಸ್ಕತ್​ನಲ್ಲಿ ಲೀಗ್ ಮ್ಯಾಚ್ ನಡೆಯಲಿವೆ. ರಾಜ್ ಕಪ್ ಫೈನಲ್ ಪಂದ್ಯ ಕರ್ನಾಟಕದಲ್ಲಿ ನಡೆಯಲಿವೆ” ಎಂದು ಹೇಳಿದರು.

    ಇದನ್ನೂ ಓದಿ: ಇಂದು ಭಾರತ-ಆಸೀಸ್ 2ನೇ ಟಿ20: ಜಯದ ಹುಮ್ಮಸ್ಸಿನಲ್ಲಿ ಸೂರ್ಯ ಕುಮಾರ್ ಸಾರಥ್ಯದ ಯುವ ಪಡೆ, ಪಂದ್ಯಕ್ಕೆ ಮಳೆ ಭೀತಿ

    ಡಾ. ರಾಜ್ ಕಪ್ ಸೀಸನ್ 6 ರಲ್ಲಿ 12 ತಂಡಗಳು, ಈ ಬಾರಿಯ ಸೀಸನ್ನಲ್ಲಿ ಒಟ್ಟು 12 ತಂಡಗಳು ಭಾಗಿಯಾಗಲಿದ್ದು, 27 ಪಂದ್ಯಗಳು ನಡೆಯಲಿದೆ.
    1. ಸಮೃದ್ದಿ ಫೈಟರ್ಸ್ ತಂಡ- ಓನರ್ ಮಂಜುನಾಥ್
    2. DX ಮ್ಯಾಕ್ಸ್ ಲೈನ್ಸ್ ತಂಡ- ಓನರ್ ದಯಾನಂದ್
    3. ರಾಮನಗರ ರಾಕರ್ಸ್ ತಂಡ- ಓನರ್ ಮಹೇಶ್ ಗೌಡ
    4. ELV ಲಯನ್ ಕಿಂಗ್ಸ್ ತಂಡ – ಓನರ್ ಪುರುಷೋತ್ತಮ್ ಭಾಸ್ಕರ್
    5. AVR ಟಸ್ಕರ್ಸ್ ತಂಡ – ಓನರ್ ಅರವಿಂದ್ ರೆಡ್ಡಿ
    6. KKR ಕಿಂಗ್ಸ್ ತಂಡ – ಓನರ್ ಲಕ್ಷ್ಮೀ ಕಾಂತ್ ರೆಡ್ಡಿ
    7. Rabit ರೇಸರ್ಸ್ ತಂಡ- ಓನರ್ ಅರು ಗೌಡ
    8. ಮಯೂರ ರಾಯಲ್ಸ್ ತಂಡ- ಓನರ್ ಸೆಂಥಿಲ್
    9. ರಾಯಲ್ ಕಿಂಗ್ಸ್ ತಂಡ- ಓನರ್ ಶ್ರೀರಾಮ್ ಮತ್ತು ಮುಖೇಶ್
    10. ಕ್ರಿಕೆಟ್ ನಕ್ಷತ್ರ ತಂಡ- ಓನರ್ ನಕ್ಷತ್ರ ಮಂಜು
    11. ಅಶು ಸೂರ್ಯ ಸೂಪರ್ ಸ್ಟಾರ್ ತಂಡ- ಓನರ್ ರಂಜಿತ್ ಪಯಾಜ್ ಖಾನ್
    12. ರುಚಿರಾ ರೇಂಜರ್ಸ್ ತಂಡ- ಓನರ್ ರಾಮ್

    ಇದನ್ನೂ ಓದಿ:  ಉತ್ತರಕಾಶಿ ಸುರಂಗ ಮಾರ್ಗ ವಿಳಂಬ; ಸಿಲುಕಿದ ಕಾರ್ಮಿಕರ ಒತ್ತಡ ನಿಯಂತ್ರಿಸಲು ಮೊಬೈಲ್ ಫೋನ್​, ಬೋರ್ಡ್ ಗೇಮ್ಸ್​!

    ರಾಜ್ ಕಪ್ ಸೀಸನ್ 6ಕ್ಕೆ ಸಿನಿತಾರೆಯರ ಬೆಂಬಲ: ರಾಜ್ ಕಪ್ ಸೀಸನ್ 6ರಲ್ಲಿ ನಟರಾದ ಡಾಲಿ ಧನಂಜಯ್, ಅನಿರುದ್ದ್, ಡಾರ್ಲಿಂಗ್ ಕೃಷ್ಣ, ಅಭಿಷೇಕ್ ಅಂಬರೀಶ್, ನೀನಾಸಂ ಸತೀಶ್, ಲೂಸ್ ಮಾದ ಯೋಗಿ, ವಶಿಷ್ಠ ಸಿಂಹ, ಪ್ರಜ್ವಲ್, ಕೋಮಲ್, ಶ್ರೀನಗರ ಕಿಟ್ಟಿ, ರಾಜುಗೌಡ ನೇತೃತ್ವದ ತಂಡಗಳು ಪಂದ್ಯದಲ್ಲಿ ಪಾಲ್ಗೊಳ್ಳಲಿವೆ. ಡಾ. ರಾಜ್ ಕಪ್​ಗಾಗಿ ಆನಂದ್ ಆಡಿಯೋ ಹೊಸ ಹೆಜ್ಜೆಯಿಟ್ಟಿದ್ದು, ಈ ಪಂದ್ಯಾವಳಿಗಾಗಿ ಸ್ಪೋರ್ಟ್ ಯೂಟ್ಯೂಬ್ ಪ್ರಾರಂಭ ಮಾಡ್ತಿದ್ದು, ಲೈವ್ ಮ್ಯಾಚ್‌ಗಳನ್ನು ಯೂಟ್ಯೂಬ್‌ನಲ್ಲಿ ನೋಡಬಹುದು.

    BBKS10: ಹೆಚ್ಚಾಗ್ತಿದೆ ಕನ್ನಡ ಪದಗಳ ಬಳಕೆ; ಮೈಕಲ್​ ಪ್ರಯತ್ನಕ್ಕೆ ಸಿಕ್ತು ಕಿಚ್ಚನ ಚಪ್ಪಾಳೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts