

ಚಿತ್ರದುರ್ಗ: ರಾಜ್ಯದಲ್ಲಿ ಮೇಲಿಂದ ಮೇಲೆ ಆತ್ಮಹತ್ಯೆ ಸಂಭವಿಸುತ್ತಿದ್ದು, ಇಂದು ಮತ್ತೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲೂ ಸಹಾಯಕ ಸಬ್ ಇನ್ಸ್ಪೆಕ್ಟರ್ವೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ವಿಪರ್ಯಾಸ ಎಂಬಂತಾಗಿದೆ.
ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಗುರುಮೂರ್ತಿ ಆತ್ಮಹತ್ಯೆ ಮಾಡಿಕೊಂಡವರು. ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಗುರುಮೂರ್ತಿ ದಂಡಿನಕುರುಬರಹಟ್ಟಿ ಗ್ರಾಮದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ.
ಇವರ ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆಯೇ ಕಾರಣ ಎನ್ನಲಾಗುತ್ತಿದೆ. ನಿನ್ನೆಯ ಹಿಂದೂ ಮಹಾಗಣಪತಿ ವಿಸರ್ಜನೆಯ ಬಂದೋಬಸ್ತ್ಗೆ ತಾವಾಗಿಯೇ ಕೇಳಿ ನಿಯೋಜನೆ ಮಾಡಿಸಿಕೊಂಡಿದ್ದರು. ಆದರೆ ಬಳಿಕ ಬಂದೋಬಸ್ತ್ಗೂ ತೆರಳದ ಅವರು ಇಂದು ಮರದಲ್ಲಿ ನೇತಾಡುತ್ತಿದ್ದ ಶವವಾಗಿ ಪತ್ತೆಯಾಗಿದ್ದಾರೆ.