VIDEO| ಮದ್ಯದ ಅಮಲಿನಲ್ಲಿ ದೇವಸ್ಥಾನದ ಮುಂದೆಯೇ ಡಾನ್ಸ್​ ಮಾಡಿದ ASIಗೆ ಕಾದಿತ್ತು ಆಘಾತ!

ASI Suspend
Published on

ಇಡುಕ್ಕಿ: ಮದ್ಯದ ಅಮಲಿನಲ್ಲಿ ಸಮವಸ್ತ್ರದಲ್ಲೇ ದೇವಸ್ಥಾನದ ಮುಂದೆ ಕುಣಿದು ಕುಪ್ಪಳಿಸಿದ ಸಹಾಯಕ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ (ಎಎಸ್​ಐ) ಅನ್ನು ಅಮಾನತು ಮಾಡಲಾಗಿದೆ.

ಈ ಘಟನೆ ಕೇರಳದಲ್ಲಿ ನಡೆದಿದೆ. ಸ್ಪೆಷಲ್​ ಬ್ರಾಂಚ್​ ವರದಿಯ ಪ್ರಕಾರ ಇಡುಕ್ಕಿ ಜಿಲ್ಲೆಯ ಸಾಂಥನಪರದ ಎಎಸ್​ಐ ಕೆ.ಪಿ. ಶಾಜಿ ಎಂಬುವರನ್ನು ಅಮಾನತು ಮಾಡಲಾಗಿದೆ. ಪೂಪ್ಪಾರ ಬಳಿ ದೇವಸ್ಥಾನದ ಉತ್ಸವದಲ್ಲಿ ಪೊಲೀಸ್​ ಅಧಿಕಾರಿಯೊಬ್ಬರು ಡಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಸ್ಪೆಷಲ್​ ಬ್ರಾಂಚ್​ ತನಿಖೆ ನಡೆಸಿ ವರದಿ ಸಲ್ಲಿಸಿತ್ತು.

ಅಮಾನತಿಗೆ ಮುಖ್ಯ ಕಾರಣವೆಂದರೆ, ಎಎಸ್​ಐ ಕರ್ತವ್ಯದ ಸಮಯದಲ್ಲಿ ಸಮವಸ್ತ್ರದಲ್ಲೇ ಸಾರ್ವಜನಿಕರ ಮುಂದೆ ಡಾನ್ಸ್ ಮಾಡುತ್ತಿರುವುದು ಕಂಡುಬಂದಿದೆ. ಕರ್ತವ್ಯ ಲೋಪ ಎಸಗಿರುವುದು ವರದಿಯಲ್ಲಿ ಸ್ಪಷ್ಟವಾಗಿದೆ. ಮುನ್ನಾರ್ ಡಿವೈಎಸ್ಪಿ ನೀಡಿದ ವರದಿಯನ್ನು ಆಧರಿಸಿ ಎರ್ನಾಕುಲಂ ಡಿಐಜಿ, ಶಾಜಿಯನ್ನು ಅಮಾನತುಗೊಳಿಸಿದ್ದಾರೆ. (ಏಜೆನ್ಸೀಸ್​) (ವಿಡಿಯೋ ಕೃಪೆ: ಕೇರಳಕೌಮುದಿ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net