25.1 C
Bangalore
Friday, December 6, 2019

ಭಾರತ ಏಷ್ಯಾಕಪ್​ ಆಡುವುದೇ ಬೇಡ ಎಂದು ವೀರು ಹೇಳಿದ್ದೇಕೆ ಗೊತ್ತಾ?

Latest News

ಚಿನ್ನಾಭರಣ ಪ್ರದರ್ಶನ, ಮಾರಾಟ

ವಿಜಯಪುರ: ಇಲ್ಲಿನ ಅಥಣಿ ರಸ್ತೆಯಲ್ಲಿರುವ ಲೀ ಗ್ರ್ಯೆಂಡಿ ಹೋಟೆಲ್‌ನಲ್ಲಿ ರಿಲಾಯನ್ಸ್ ಜ್ಯುವೆಲ್ಸ್ ವತಿಯಿಂದ ಡಿ. 6ರಿಂದ ನಾಲ್ಕು ದಿನಗಳ ಕಾಲ ಚಿನ್ನ ಮತ್ತು...

ವಿದ್ಯಾರ್ಥಿಗಳು ಸಮಾಜಮುಖಿ ಜೀವನ ನಡೆಸಿ

ಹುನಗುಂದ: ಮಕ್ಕಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸ್ವಾಸ್ಥೃ ಸಮಾಜ ಪರಿಕಲ್ಪನೆಯೊಂದಿಗೆ ಸಮಾಜಮುಖಿ ಜೀವನ ನಡೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಮನ್ವಯಾಧಿಕಾರಿ ಗುರುರಾಜ್...

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ನವದೆಹಲಿ: ಈ ಬಾರಿಯ ಏಷ್ಯಾ ಕಪ್​ನಲ್ಲಿ ಭಾರತ ಭಾಗವಹಿಸುವುದೇ ಬೇಡ ಎಂದು ಭಾರತದ ಮಾಜಿ ಕ್ರಿಕೆಟಿಗ, ಸ್ಫೋಟಕ ಬ್ಯಾಟ್ಸ್​ಮನ್​ ವೀರೇಂದ್ರ ಸೆಹ್ವಾಗ್​ ಗುಡುಗಿದ್ದಾರೆ.

ಹೌದು, ಅವರು ಹಾಗೆ ಹೇಳಲೂ ಒಂದು ಕಾರಣವಿದೆ. ಸೆಪ್ಟೆಂಬರ್​ 15ರಿಂದ ದುಬೈನಲ್ಲಿ ಆರಂಭವಾಗುತ್ತಿರುವ ಏಷ್ಯಾಕಪ್​ ಸರಣಿಯಲ್ಲಿ ಭಾರತ ಸೆ. 18 ಮತ್ತು 19ರಂದು ಒಂದರ ಹಿಂದೊಂದರಂತೆ ಒಂದು ಪಂದ್ಯವನ್ನು ಆಡುವಂತೆ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ನಿರಂತರ ಆಟದ ಈ ಶೆಡ್ಯೂಲಿಂಗ್​ ವಿಚಾರದಲ್ಲಿ ಕೋಪಗೊಂಡಿರುವ ವೀರೂ, ” ಈ ರೀತಿಯ ವೇಳಾಪಟ್ಟಿಯನ್ನು ತಯಾರಿಸುವುದಿದ್ದರೆ ಭಾರತ ಟೂರ್ನಿಯಲ್ಲಿ ಪಾಲ್ಗೊಳ್ಳುವುದೇ ಬೇಡ. ಭಾರತ ತನ್ನ ಪಾಲ್ಗೊಳ್ಳುವಿಕೆಯನ್ನು ನಿರಾಕರಿಸಬೇಕು,” ಎಂದು ಹೇಳಿದ್ದಾರೆ.

ಟೂರ್ನಿಯಲ್ಲಿ ಸೆ. 18ರಂದು ಕ್ವಾಲಿಫೈರ್​ ತಂಡವನ್ನು ಎದುರಿಸಲಿರುವ ಭಾರತ ಅದರ ಮರುದಿನವೇ ತನ್ನ ಸಾಂಪ್ರದಾಯಿಕ ವೈರಿ ಪಾಕಿಸ್ತಾನವನ್ನು ಎದುರಿಸಬೇಕಾಗಿದೆ. ಇಂಥ ಹೈ ವೋಲ್ಟೇಜ್​ ಪಂದ್ಯಕ್ಕೇ ಒಂದೇ ಒಂದು ದಿನದ ವಿಶ್ರಾಂತಿಯೂ ಸಿಗದಿರುವುದು ವೀರೂ ಕೋಪ ಮತ್ತಷ್ಟು ಹೆಚ್ಚಲು ಕಾರಣವಾಗಿದೆ.

ಈ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಸೆಹ್ವಾಗ್​, ” ಏಷ್ಯಾ ಕಪ್​ ಟೂರ್ನಿಯ ವೇಳಾ ಪಟ್ಟಿಯನ್ನು ನೋಡಿ ನಾನು ನಿಜಕ್ಕೂ ದಿಗ್ಭ್ರಾಂತನಾದೆ. ಯಾಕೆಂದರೆ ಟೂರ್ನಿಯಲ್ಲಿ ಭಾರತ ಒಂದರ ಹಿಂದೊಂದರಂತೆ ಒಂದು ಎಂಬಂತೆ ಎರಡು ಪಂದ್ಯಗಳನ್ನು ನಿರಂತರವಾಗಿ ಆಡಬೇಕಾದ ಪರಿಸ್ಥಿತಿ ಇದೆ. ಇತ್ತೀಚೆಗೆ ಮುಕ್ತಾಯ ಕಂಡ ಇಂಗ್ಲೆಂಡ್​ ವಿರುದ್ಧದ ಟಿ20 ಪಂದ್ಯದಲ್ಲಿ ಒಂದು ಪಂದ್ಯದಿಂದ ಇನ್ನೊಂದು ಪಂದ್ಯಕ್ಕೆ ಎರಡು ದಿನಗಳ ವಿಶ್ರಾಂತಿ ನೀಡಲಾಗಿತ್ತು. ಆದರೆ, ಏಕದಿನ ಪಂದ್ಯಕ್ಕೆ, ಅದೂ ದುಬೈನಂಥ ಒಣ ಹವೆಯಲ್ಲಿ ಆಯೋಜಿಸಿರುವ ಪಂದ್ಯಕ್ಕೆ ಒಂದು ದಿನವೂ ಬಿಡುವಿಲ್ಲದಿದ್ದರೆ ಹೇಗೆ? ಇದು ಸರಿಯಾದ ವೇಳಾಪಟ್ಟಿಯಲ್ಲ. ಏಷ್ಯಾ ಕಪ್​ ಆಡಲು ಯಾಕಿಷ್ಟು ಆತುರ. ಈ ಟೂರ್ನಿಯಲ್ಲಿ ಆಡುವುದೇ ಬೇಡ. ಬೇರೆ ಟೂರ್ನಿಗಳಿಗೆ ತಂಡವನ್ನು ಸಜ್ಜುಗೊಳಿಸಿದರಾಯ್ತು. ಎರಡು ದಿನ ನಿರಂತರವಾಗಿ ಪಂದ್ಯವಾಡುವುದು ನಿಜಕ್ಕೂಕಷ್ಟ ಸಾಧ್ಯ,”ಎಂದಿದ್ದಾರೆ.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...