More

    ಏಷ್ಯನ್ ಗೇಮ್ಸ್| ಮಳೆಯಿಂದಾಗಿ ಫೈನಲ್ ಪಂದ್ಯ ರದ್ದು; ಟೀಂ ಇಂಡಿಯಾಗೆ ಚಿನ್ನದ ಪದಕ

    ನವದೆಹಲಿ: ಚೀನಾದ ಹ್ಯಾಂಗ್​​​​​​​​​ಝೌನಲ್ಲಿ ನಡೆಯುತ್ತಿರುವ ಏಷ್ಯನ್​ ಗೇಮ್ಸ್​ ಪುರುಷರ ಟಿ-20 ಕ್ರಿಕೆಟ್​ ಪಂದ್ಯದಲ್ಲಿ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಫೈನಲ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ. ಈ ಮೂಲಕ ಭಾರತ ಕ್ರಿಕೆಟ್ ತಂಡ ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕವನ್ನು ಜಯಿಸಿದೆ.

    ಹ್ಯಾಂಗ್​ಝೌನ ಪಿಂಗ್​ಫೆಂಗ್ ಕ್ಯಾಂಪಸ್ ಕ್ರಿಕೆಟ್​ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್​​ ಮಾಡಿದ ಅಫ್ಘಾನಿಸ್ತಾನ ತಂಡವು 18.2 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 112 ರನ್​ ಕಲೆಹಾಕಿದಾಗ ಮಳೆ ಬರಲಾರಂಭಿಸಿತು. ಈ ವೇಳೆ ಎಡಬಿಡದೆ ಮಳೆ ಸುರಿದ ಪರಿಣಾಮ ಪಂದ್ಯವನ್ನು ರದ್ದುಗೊಳಿಸಬೇಕಾಯಿತು.

    ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದ ಟೀಮ್ ಇಂಡಿಯಾವನ್ನು ವಿಜಯಿ ಎಂದು ಘೋಷಿಸಲಾಯಿತು. ಈ ಮೂಲಕ ಏಷ್ಯನ್ ಗೇಮ್ಸ್​ ಕ್ರಿಕೆಟ್​ನಲ್ಲಿ ಭಾರತ ತಂಡವು ಸ್ವರ್ಣ ಪದಕವನ್ನು ಗೆದ್ದುಕೊಂಡಿದೆ. ಇನ್ನು ರನ್ನರ್ ಅಪ್ ತಂಡ ಅಫ್ಘಾನಿಸ್ತಾನ್ ತಂಡವು ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts