ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿಯಲ್ಲಿ ಉದ್ಯೋಗಾವಕಾಶ; 368 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ASRB
Published on

ಬೆಂಗಳೂರು: ಎಎಸ್‌ಆರ್‌ಬಿ (ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ) ಅಧಿಕೃತ ಅಧಿಸೂಚನೆ ಮೂಲಕ ಪ್ರಿನ್ಸಿಪಾಲ್ ಸೈಂಟಿಸ್ಟ್, ಸೀನಿಯರ್ ಸೈಂಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟಂಬರ್ 08 ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು:368

ಸ್ಥಳ: ಭಾರತಾದ್ಯಂತ

ವೇತನ: ಪ್ರತಿ ತಿಂಗಳು 131400-2182000 ರೂ.

ಹುದ್ದೆಯ ವಿವರ

*ಪ್ರಿನ್ಸಿಪಾಲ್ ಸೈಂಟಿಸ್ಟ್- 80

*ಸೀನಿಯರ್ ಸೈಂಟಿಸ್ಟ್- 288

ವಿದ್ಯಾರ್ಹತೆ

ಪ್ರಿನ್ಸಿಪಾಲ್ ಸೈಂಟಿಸ್ಟ್​​​​-ಪೋಸ್ಟ್ ಗ್ರಾಜುಯೇಷನ್​, ಸ್ನಾತಕೋತ್ತರ ಪದವಿ, ಪಿಎಚ್​​ಡಿ

ಸೀನಿಯರ್ ಸೈಂಟಿಸ್ಟ್-ಪಿಎಚ್​​ಡಿ

ವಯೋಮಿತಿ

ಪ್ರಿನ್ಸಿಪಾಲ್ ಸೈಂಟಿಸ್ಟ್​​​​-52

ಸೀನಿಯರ್ ಸೈಂಟಿಸ್ಟ್-47

ವಯೋಸಡಿಲಿಕೆ

ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ ನಿಯಮಗಳ ಪ್ರಕಾರ

ಅರ್ಜಿ ಶುಲ್ಕ

ಎಸ್ಸಿ, ಎಸ್ಟಿ, ಅಂಗವಿಕಲ, ಮಹಿಳೆಯರು-ಶುಲ್ಕ ವಿನಾಯಿತಿ

ಇತರ ಅಭ್ಯರ್ಥಿಗಳು- 1500ರೂ.

ಪಾವತಿಸುವ ವಿಧಾನ-ಆನ್​​​​ಲೈನ್​​​

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ವೇತನ

ಪ್ರಿನ್ಸಿಪಾಲ್ ಸೈಂಟಿಸ್ಟ್​​​​- 144200-218200/-

ಸೀನಿಯರ್ ಸೈಂಟಿಸ್ಟ್-131400-217100/-

ಅರ್ಜಿ ಸಲ್ಲಿಸುವ ವಿಧಾನ

*ಮೊದಲನೆಯದಾಗಿ ASRB ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ.

*ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

*ASRB ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಅಪ್ಲೋಡ್ ಮಾಡಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

*ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

ಅರ್ಜಿ ಸಲ್ಲಿಕೆ ಪ್ರಾರಂಭ: 18-08-2023

ಅರ್ಜಿ ಸಲ್ಲಿಕೆಗೆ ಹಾಗೂ ಶುಲ್ಕ ಪಾವತಿಸಲು ಕೊನೇ ದಿನ: 8-09-2023

ಹೆಚ್ಚಿನ ಮಾಹಿತಿಗಾಗಿ: asrb.org.in

ಸೂಚನೆ

ಯಾವುದೇ ಮಾಹಿತಿ/ಸ್ಪಷ್ಟೀಕರಣ/ಮಾರ್ಗದರ್ಶನಕ್ಕಾಗಿ ಅಭ್ಯರ್ಥಿಯು ASRB, KAB – I, Pusa, New Delhi ಕಚೇರಿಯನ್ನು 25840251 Extn 204 ನಲ್ಲಿ ಸಂಪರ್ಕಿಸಬಹುದು.

ಪ್ರಶ್ನೆಗಳನ್ನು ಇ-ಮೇಲ್ ಮೂಲಕ query@asrb.org.in ಗೆ ಕಳುಹಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net