More

    ಎನ್. ಎಸ್. ಎಸ್ ವಾರ್ಷಿಕ ಶಿಬಿರದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ.

    ನಗರದ ಆದರ್ಶ ಶಿಕ್ಷಣ ಸಂಸ್ಥೆಯ ಶ್ರೀ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ಅಂತೂರು ಬೆಂತೂರು ಗ್ರಾಮದಲ್ಲಿ ನಡೆಯುತ್ತಿರುವ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಜನಸಾಮಾನ್ಯರಿಗೆ ಕಾನೂನು ಅರಿವು ನೆರವು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮವನ್ನು ಉದ್ದೇಶಿಸಿ ಹಿರಿಯ ವಕೀಲರಾದ ವೈ ಡಿ ತಳವಾರವರು ಮಾತನಾಡಿ ಮಾತು ಬಲ್ಲವನಿಗೆ ಜಗಳವಿಲ್ಲ, ಕಾನೂನು ಬಲ್ಲವನಿಗೆ ವ್ಯಾಜ್ಯವಿಲ್ಲ ಎಂಬ ಮಾತಿದೆ. ದೇಶದ ಕಾನೂನು ತಿಳಿದುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ. ಕಾನೂನಿನ ವಿಷಯವೆಂದರೇ ಸಮುದ್ರವಿದ್ದ ಹಾಗೆ. ಆದರು ಸಹ ನಿತ್ಯದ ಜೀವನ ಸರಳವಾಗಿ ನಡೆಯಲು ಅಗತ್ಯವಾಗಿರುವ ಕಾನೂನಿನ ಅರಿಯಬೇಕು ಎಂದು ಹೇಳಿದರು.

    ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜನಸಾಮಾನ್ಯರಿಗಾಗಿ ಕಾನೂನು ಮಾಹಿತಿ ಪುಸ್ತಕ ಪ್ರಕಟಿಸಿದೆ. ಅತ್ಯಂತ ಕಡಿಮೆ ಬೆಲೆಗೆ ಮಾರಾಟಕ್ಕೆ ಇದು ಲಭ್ಯವಿದೆ. ಪ್ರತಿಯೊಬ್ಬರು ಇದನ್ನು ಖರೀದಿಸಿ ಕಾನೂನಿನ ಸಂಕ್ಷಿಪ್ತ ಜ್ಞಾನ ಪಡೆದುಕೊಂಡು, ಇತರರಿಗೂ ತಿಳಿಸಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ರಾಜೀ ಸಂಧಾನ ಹಾಗೂ ಮಧ್ಯಸ್ಥಿಕೆ ಮೂಲಕ ಪರಿಹರಿಸಿಕೊಂಡರೆ ಕಕ್ಷಿದಾರರರಿಗೆ ಹಣ, ಸಮಯ ಉಳಿಯುತ್ತದೆ ಎಂದು ತಮ್ಮ ಉಪನ್ಯಾಸದಲ್ಲಿ ಸ್ವಯಂಸೇವಕ ಸೇವಕರೊಂದಿಗೆ ಹಂಚಿಕೊಂಡರು.

    ಕಾರ್ಯಕ್ರಮದಲ್ಲಿ ಯುವ ವಕೀಲರಾದ ಶ್ರೀ ಯಲ್ಲಪ್ಪ ಕುರಹಟ್ಟಿ, ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಎಸ್‌ಡಿಎಂಸಿ ಸದಸ್ಯರು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಪ್ರೊ. ಬಾಹುಬಲಿ ಪಿ ಜೈನರ, ದೈಹಿಕ ಶಿಕ್ಷಕರಾದ ಶ್ರೀಯುತ ಅಂಗಡಿ ವಿದ್ಯಾರ್ಥಿ ಮುಖಂಡರಾದ  ಮನೋಜ್ ದಲಬಂಜನ್,  ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕ ಸೇವಕರು ಈ ಒಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts