More

    ಜೀವ ರಕ್ಷಣೆಗೆ ಕಾರಣವಾಗುವ ರಕ್ತದಾನದಂತಹ ಮಹತ್ತರ ಕಾರ್ಯದಲ್ಲಿ ಭಾಗಿಯಾಗಿ – ಕುಷ್ಟಗಿ

    ಜೀವ ರಕ್ಷಣೆಗೆ ಕಾರಣವಾಗುವ ರಕ್ತದಾನದಂತಹ ಮಹತ್ತರ ಕಾರ್ಯದಲ್ಲಿ ಭಾಗಿಯಾಗುವ ಸಾಮಾಜಿಕ ಕಾಳಜಿ ಬೆಳೆಸಿಕೊಳ್ಳಬೇಕು ಎಂದು ಆದರ್ಶ ಶಿಕ್ಷಣ ಸಮಿತಿಯ ಶ್ರೀ ವಿ ಆರ್ ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ಐ ಕ್ಯೂ ಎ ಸಿ ಅಡಿಯಲ್ಲಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ದಿ. ಶ್ರೀ ವಿಶ್ವನಾಥ್ ಆರ್ ಕುಷ್ಟಗಿ ಇವರ ಜನ್ಮ ಶತಮಾನೋತ್ಸವ ನಿಮಿತ್ಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೆಡ್ ಕ್ರಾಸ್ ಘಟಕ ಹಾಗೂ ರೆಡ್ ರಿಬ್ಬನ್ ಸಹಯೋಗದಲ್ಲಿ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು ಸಂಸ್ಥೆಯ ಅಧ್ಯಕ್ಷರಾದ ಶ್ರೀ. ಕೆ. ವಿ. ಕುಷ್ಟಗಿ ಅವರು ಜ್ಯೋತಿ ಬೆಳಗಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

     ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದೆ ಡಿಎಪಿಸಿಓ ಮೇಲ್ವಿಚಾರಕರಾದ ಡಾ. ಬಸವರಾಜ್ ಲಗಾಟಿ  ಮಾತನಾಡಿ ‘ದೇಶದಲ್ಲಿ ಪ್ರತಿನಿತ್ಯ ಅಪಘಾತ ಪ್ರಕರಣಗಳಲ್ಲಿ ಸಾಕಷ್ಟು ಮಂದಿ ಮೃತಪಡುತ್ತಿದ್ದಾರೆ’ ಮನುಷ್ಯನಿಗೆ ಮನುಷ್ಯನ ರಕ್ತವನ್ನೇ ನೀಡಬೇಕು ಆದರೆ  ಅನೇಕರಿಗೆ ರಕ್ತದಾನ ಮಾಡಲು ಆಸಕ್ತಿ ಇಲ್ಲ. ಲಕ್ಷಾಂತರ ಮಂದಿ ರಕ್ತಸ್ರಾವದಿಂದಾಗಿ ಜೀವ ಉಳಿಸಿಕೊಳ್ಳಲು ಜೀವನ್ಮರಣ ಹೋರಾಟ ನಡೆಸುತ್ತಾರೆ. ಇಂತಹ ಸಂದರ್ಭದಲ್ಲಿ ರಕ್ತದಾನ ಮಾಡಿ ಜೀವ ಉಳಿಸಬೇಕು’ ಎಂದು ಸಲಹೆ ನೀಡಿದರು.

    ಡಾ. ಮಧುಮತಿ ಅವರು ಮಾತನಾಡಿ ಮಹಿಳೆಯರು ಪ್ರಸವದ ಸಂದರ್ಭದಲ್ಲಿ ರಕ್ತಹೀನತೆಯಿಂದ ತೊಂದರೆಗೆ ಸಿಲುಕಿ ಮೃತಪಟ್ಟಿರುವ ನಿದರ್ಶನಗಳಿವೆ. ಇಂತಹವರಿಗೂ ನೀಡುವ ರಕ್ತವು ಜೀವ ದ್ರವ್ಯವಾಗಿ ಪ್ರಾಣ ಉಳಿಸುತ್ತದೆ. ರಕ್ತದಾನದಿಂದ ಆರೋಗ್ಯ ಸುಧಾರಿಸುತ್ತದೆ. ದೇಹದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ಹೀಗಾಗಿ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು. ‘ಇತ್ತೀಚಿನ ದಿನಗಳಲ್ಲಿ ರಕ್ತ ವಿಭಜಿಸಿ ಯಾವ ಅಂಶದ ಕೊರತೆ ಇದೆಯೋ ಅದನ್ನು ಮಾತ್ರ ರೋಗಿಗೆ ನೀಡುವ ತಂತ್ರಜ್ಞಾನ ಅಭಿವೃದ್ಧಿಯಾಗಿದೆ ಇದರಿಂದ ರಕ್ತದ ಅಭಾವಕ್ಕೆ ಸ್ವಲ್ಪಮಟ್ಟಿಗೆ ಪರಿಹಾರ ಸಿಗುತ್ತಿದೆ. ಮಹಿಳೆಯರಲ್ಲಿ ಶೇ 80ರಷ್ಟು ಮಂದಿಗೆ ರಕ್ತಹೀನತೆ ಸಮಸ್ಯೆ ಕಾಡುತ್ತಿದೆ. ದಿನದಿಂದ ದಿನಕ್ಕೆ ರಕ್ತದ ಬೇಡಿಕೆ ಹೆಚ್ಚುತ್ತಿದೆ. ಆದರೆ, ಕೃತಕವಾಗಿ ರಕ್ತ ಉತ್ಪಾದಿಸಲು ಸಾಧ್ಯವಿಲ್ಲ. ರಕ್ತದ ಕೊರತೆ ನೀಗಿಸುವ ನಿಟ್ಟಿನಲ್ಲಿ ರಕ್ತದಾನ ಶಿಬಿರಗಳ ಸಂಖ್ಯೆ ಹೆಚ್ಚಿಸಬೇಕು’ ಎಂದರು.

    ಹಿರಿಯ ವೈದ್ಯಾಧಿಕರಗಳಾದ ಡಾ. ಎ ಎನ್ ಶಿವಪೂರ ಅವರು ಮಾತನಾಡಿ ‘ರಕ್ತದಾನದಿಂದ ಆರೋಗ್ಯದ ಮಾಹಿತಿ ಸಿಗುತ್ತದೆ, ರಕ್ತದ ಗುಂಪು ಯಾವುದೆಂದು ತಿಳಿಯುತ್ತದ. ವಿದ್ಯಾರ್ಥಿಗಳು ರಕ್ತದಾನದ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು. ರಕ್ತದಾನದಿಂದ ಆರೋಗ್ಯ ಸಮಸ್ಯೆ ಎದುರಾಗುತ್ತದೆ ಎಂಬ ತಪ್ಪು ಕಲ್ಪನೆಯಿದೆ. ಆದರೆ ರಕ್ತದಾನದಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಹೀಗಾಗಿ ರಕ್ತದಾನ ಕುರಿತು ಭಯಪಡುವ ಅಗತ್ಯವಿಲ್ಲ. ಆರೋಗ್ಯವಂತ ವ್ಯಕ್ತಿ ವರ್ಷದಲ್ಲಿ 4 ಬಾರಿ ರಕ್ತದಾನ ಮಾಡಬಹುದು ಎಂದು ವಿವರಿಸಿದರು.

          ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಕೆ ಗಿರಿರಾಜ ಕುಮಾರ, ಉಪ ಪ್ರಾಚಾರ್ಯರಾದ ಡಾ. ವಿ ಟಿ ನಾಯ್ಕರ್,  ಎನ್. ಎಸ್. ಎಸ್ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಪ್ರೊ. ಬಿ ಪಿ ಜೈನರ್, ರೆಡ್ ಕ್ರಾಸ್ ಮುಖ್ಯಸ್ಥರಾದ ಪ್ರೊ. ಫಿರೋಜ್ ಖಾನ್ ವಿದ್ಯಾರ್ಥಿ ಮುಖಂಡರಾದ ಕು. ಮನೋಜ್ ದಲಭಂಜನ, ಕುಮಾರ್ ಜಯಂತ್ ಮಹಾವಿದ್ಯಾಲಯದ ಶಿಕ್ಷಕ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts