More

    ಆದರ್ಶ ಶಿಕ್ಷಣ ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರಕವಿ ಕುವೆಂಪುರ ಜನ್ಮ ಶತಮಾನೋತ್ಸವ ಆಚರಣೆ

    ನಗರದ ಆದರ್ಶ ಶಿಕ್ಷಣ ಸಮಿತಿಯ ವಿ ಆರ್ ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ಐ ಕ್ಯೂ ಎ ಸಿ ಅಡಿಯಲ್ಲಿ ಕನ್ನಡ ವಿಭಾಗದ ಸಹಯೋಗದಲ್ಲಿ ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಕೆ ಗಿರಿರಾಜ್ ಕುಮಾರ್ ಅವರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಮಾತನಾಡಿ ವಿಶ್ವಮಾನವ ಸಂದೇಶ ನೀಡಿದವರು ಕನ್ನಡದ ಮೊದಲನೆಯ ಜ್ಞಾನಪೀಠ ಪ್ರಶಸ್ತಿಯನ್ನೂ ಎರಡನೆಯ ರಾಷ್ಟ್ರಕವಿಯಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು ಅಷ್ಟೇ ಅಲ್ಲದೆ ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು ರಾಷ್ಟ್ರಕವಿ ಕುವೆಂಪು ಎಂದು ಹೇಳಲು ತುಂಬಾ ಸಂತೋಷವೆನಿಸುತ್ತದೆ.

    ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ ಪ್ರಾಂಶುಪಾಲರೂ ಆಗಿದ್ದರು ಮುಂದೆ ಅದೇ ವಿಶ್ವವಿದ್ಯಾಲಯದ ಉಪಕುಲಪತಿಗಳಾದರು ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು ರಾಷ್ಟ್ರಕವಿ ಕುವೆಂಪು ಅವರು ವಿಶ್ವವಿದ್ಯಾನಿಲಯವನ್ನು ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದ ಶ್ರೇಯಸ್ಸು ಕುವೆಂಪು ಅವರಿಗೆ ಸಲ್ಲುತ್ತದೆ.

    ಕುವೆಂಪು ಅವರು ಕನ್ನಡದ ಶ್ರೇಷ್ಠ ಕವಿಯಾಗಿ ವಿಮರ್ಶಕರಾಗಿ ನಾಟಕಕಾರರಾಗಿ ಅತ್ಯುತ್ತಮ ಚಿಂತಕಕರಾಗಿ ಮತ್ತು ಕಾದಂಬರಿಗಾರರಾಗಿ ಕನ್ನಡ ಜನರ ಮನಸ್ಸಿನಲ್ಲಿ ಅಚ್ಚಳಿಯದ ಹಾಗೆ ಹಾಸು ಹೊಕ್ಕಾಗಿದ್ದಾರೆ  20ನೇ ಶತಮಾನದ ಅತ್ಯುತ್ತಮ ಕನ್ನಡ ಕವಿ ಎಂದು ವ್ಯಾಪಕವಾಗಿ ಪ್ರಸಿದ್ದಿಯಾದವರು ಕುಪ್ಪಳ್ಳಿ, ವೆಂಕಟಪ್ಪ ಅವರು ಕುವೆಂಪು ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿದ್ದಾರೆ ಕನ್ನಡ ಲೇಖಕರಲ್ಲಿ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾದ ಮೊದಲಿಗರು ಹೀಗೆ ಅನೇಕ ವಿಚಾರಗಳನ್ನು ತಮ್ಮ ಮಾತುಗಳಲ್ಲಿ ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

    ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪ ಪ್ರಾಚಾರ್ಯರು ಹಾಗೂ ಐಕ್ಯೂ ಏ ಸಿ ಕೋ ಆರ್ಡಿನೇಟರ್ ಡಾ.  ವಿ ಟಿ ನಾಯ್ಕರ್ ಡಾ. ಸವಿತಾ ಬಂಡಾರ್ಕರ್ ಪ್ರೊ. ಎಸ್ ಎಂ ಬೆಳಗಾಂ ಪ್ರೊ. ಫಿರೋಜ್ ಖಾನ್ ಪ್ರೊ ಅಕ್ಷತಾ ಸೆಟ್ ಪ್ರೊ . ಸಿತಾರಾ ರಾಯಬಾಗಿ ಆಫೀಸ್ ಸಿಬ್ಬಂದಿ ಶ್ರೀ ರವೀಶ್ ಶ್ರೀ ಕಲಬುರ್ಗಿ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಬಾಹುಬಲಿ  ಜೈನರ ಹಾಗೂ ವಿವಿಧ ವಿಭಾಗಗಳ ವಿದ್ಯಾರ್ಥಿ ಮುಖಂಡರು ಈ ಒಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts