ಅಪ್ರಾಪ್ತೆ ಅತ್ಯಾಚಾರ ಕೇಸ್​; ಪೊಲೀಸರಿಂದ ತಪ್ಪಿಸಿಕೊಂಡು ಕೆರೆಗೆ ಹಾರಿ ಪ್ರಾಣಬಿಟ್ಟ ಪ್ರಮುಖ ಆರೋಪಿ

Assam Accused
Published on

ಗುವಾಹಟಿ: ಅಸ್ಸಾಂನ ಧಿಂಗ್​ನಲ್ಲಿ ಅಪ್ರಾಪ್ತ ವಯಸ್ಕಳ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ತಫಾಜುಲ್ ಇಸ್ಲಾಂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಫಾಜುಲ್ ಇಸ್ಲಾಂನನ್ನು ಶುಕ್ರವಾರ (ಆಗಸ್ಟ್​ 23) ಬಂಧಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ಪ್ರದೇಶದಲ್ಲಿ ಮಹಜರ್​ ಮಾಡಲು ಪೊಲೀಸರು ಆರೋಪಿಯನ್ನು ಕರೆತಂದಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಆರೋಪಿಯು ಘಟನೆ ನಡೆದ ಸಮೀಪದಲ್ಲೇ ಇದ್ದ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕುರಿತು ಮಾತನಾಡಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಸ್ಥಳ ಮಹಜರಿಗೆ ಕರೆದುಕೊಂಡು ಹೋದ ವೇಳೆ ಆತ ತಪ್ಪಿಸಿಕೊಂಡು ನೀರಿಗೆ ಹಾರಿ ಪ್ರಾಣ ಬಿಟ್ಟಿದ್ದಾನೆ. ಘಟನೆ ನಡೆದ ಕ್ಷಣದಿಂದ ಪೊಲೀಸರು, ಎಸ್​ಡಿಆರ್​ಎಫ್​ ಅಧಿಕಾರಿಗಳ ಸಹಾಯ ಪಡೆದು ಇಂದು (ಆಗಸ್ಟ್​ 24) ಬೆಳಗ್ಗೆ ಆತನ ಮೃತದೇಹವನ್ನು ಹೊರತೆಗೆಯಲಾಯಿತು. ತಲೆಮಾರಿಸಿಕೊಂಡಿರುವ ಇನ್ನಿಬ್ಬರು ಆರೋಪಿಗಳನ್ನು ಪತ್ತೆ ಹಚ್ಚಲು ತಂಡ ರಚಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಅಸ್ಸಾಂನ ಧಿಂಗ್​ನಲ್ಲಿ ಟ್ಯೂಷನ್ ಮುಗಿಸಿ ಸೈಕಲ್‌ನಲ್ಲಿ ಮನೆಗೆ ಹೋಗುತ್ತಿದ್ದ ಅಪ್ರಾಪ್ತ ವಯಸ್ಕಳ ಮೇಲೆ ಮೂವರು ದುರುಳರು ಸಾಮೂಹಿಕ ಅತ್ಯಾಚಾರ ಎಸಗಿದ್ದರು.ಗಾಯಗೊಂಡು ಮೂರ್ಚೆ ಹೋಗಿದ್ದ ಬಾಲಕಿ ಕೆರೆ ಸಮೀಪದ ರಸ್ತೆ ಬದಿಯಲ್ಲಿ ಬಿದ್ದಿದ್ದಳು. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಇನ್ನುಳಿದವಿರಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net