More

    ಅಸ್ಸಾಂ ಸಿಎಂ ವಿರುದ್ಧ ಶಿವಮೊಗ್ಗ ಕಾಂಗ್ರೆಸ್ ಕಿಡಿ

    ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯಿಂದ ಬಿಜೆಪಿ ನಾಯಕರು ವಿಚಲಿತರಾಗಿದ್ದಾರೆ. ಹೀಗಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಸರ್ಮ ಕುಮ್ಮಕ್ಕಿನಿಂದ ಅಸ್ಸಾಂನಲ್ಲಿ ಯಾತ್ರೆಗೆ ಅಡ್ಡಿಪಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ದೂರಿದರು.

    ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ರಾಜಕೀಯ ಪ್ರೇರಿತವಾಗಿ ತೊಂದರೆ ನೀಡಲಾಗುತ್ತಿದೆ ಎಂದು ಆರೋಪಿಸಿ ಮಂಗಳವಾರ ಕೆಪಿಸಿಸಿಯಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ಕರೆನೀಡಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಕುಮ್ಮಕ್ಕಿನಿಂದ ಅಸ್ಸಾಂ ಸರ್ಕಾರ ಯಾತ್ರೆಯನ್ನು ಹತ್ತಿಕ್ಕಲ್ಲು ಮುಂದಾಗಿದೆ ಎಂದು ಆರೋಪಿಸಿದರು.
    ಅಸ್ಸಾಂ ಮುಖ್ಯಮಂತ್ರಿಗೆ ರಾಹುಲ್ ಗಾಂಧಿ ಅವರ ಯಾತ್ರೆಯಿಂದ ದಿಗ್ಭ್ರಮೆಯಾದಂತಿದೆ. ಅವರು ಪ್ರಜಾಪ್ರಭುತ್ವದ ಹಕ್ಕನ್ನು ಮೊಟಕುಗೊಳಿಸಲು ಮುಂದಾಗಿದೆ. ಕೂಡಲೇ ಅವರು ತಮ್ಮ ಸ್ಥಾನ್ಕಕೆ ರಾಜೀನಾಮೆ ಸಲ್ಲಿಸಬೇಕೆಂದು ಆಗ್ರಹಿಸಿದರು. ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಅಸ್ಸಾಂ ಸಿಎಂ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
    ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ನಗರ ಪಾಲಿಕೆ ಮಾಜಿ ಸದಸ್ಯರಾದ ವಿಶ್ವನಾಥ ಕಾಶಿ, ಎಸ್.ಕೆ.ಮರಿಯಪ್ಪ, ಎಚ್.ಸಿ.ಯೋಗೇಶ್, ಪ್ರಮುಖರಾದ ಚಂದ್ರಭೂಪಾಲ, ಅಕ್ರಂ ಪಾಶಾ, ವೈ.ಎಚ್.ನಾಗರಾಜ್, ಎನ್.ರಮೇಶ್, ದಿನೇಶ್ ಪಾಟೀಲ್, ಸೌಗಂಧಿಕಾ, ಕವಿತಾ ರಾಘವೇಂದ್ರ, ಪ್ರವೀಣ್‌ಕುಮಾರ್ ಇತರರಿದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts