More

    ಹಲ್ಲೆ ಖಂಡಿಸಿ ವೈದ್ಯರ ಪ್ರತಿಭಟನೆ

    ಬೆಳಗಾವಿ: ವೈದ್ಯರೊಬ್ಬರ ಮೇಲೆ ರೋಗಿಯ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪಿಸಿ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಐಎಂಎ (ಇಂಡಿಯನ್ ಮೆಡಿಕಲ್ ಅಸೋಸಿಯೇಷನ್) ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

    ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ವಿಭಾಗ ಬಂದ್ ಮಾಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವೈದ್ಯರು, ಹಲ್ಲೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಐಎಂಎ ಜಿಲ್ಲಾ ಅಧ್ಯಕ್ಷ ಡಾ.ಅನಿಲ ಪಾಟೀಲ ಮಾತನಾಡಿ, ಚಿಕಿತ್ಸೆ ಪಡೆದ ರೋಗಿಯ ಕುಟುಂಬಸ್ಥರ ತಪ್ಪು ಕಲ್ಪನೆಯಿಂದ ಮಾರುತಿ ಗಲ್ಲಿಯ ಜೋಶಿ ಆಸ್ಪತ್ರೆ ಬಂದ್ ಮಾಡಿಸಿ, ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ. ರೋಗಿಯ ಜೀವ ರಕ್ಷಣೆಗೆ ಐಎಂಎ ಸದಸ್ಯ ವೈದ್ಯರೊಬ್ಬರು ತಾತ್ಕಾಲಿಕ ಚಿಕಿತ್ಸೆ ನೀಡಿದ್ದರು. ಚಿಕಿತ್ಸೆ ಪಡೆದು ಮನೆಗೆ ತೆರಳಿ, ಎರಡು ದಿನಗಳ ಬಳಿಕ ಕುಟುಂಬಸ್ಥರು ರೋಗಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಸದ್ಯ ರೋಗಿ ಆರೋಗ್ಯಯುತವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಸೂಚಿಸಲಾಗಿದೆ ಎಂದು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರು. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತ ಡಾ. ಕೆ.ತ್ಯಾಗರಾಜನ್ ಅವರಿಗೂ ಮನವಿ ಸಲ್ಲಿಸಲಾಗಿದೆ. ಈ ಕುರಿತಂತೆ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಡಾ.ದೇವಗೌಡ, ಡಾ.ರವೀಂದ್ರ ಅನಗೋಳ ಇತರರಿದ್ದರು.

    ಪರದಾಡಿದ ರೋಗಿಗಳು

    35ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳಲ್ಲಿ ಮಂಗಳವಾರ ಒಪಿಡಿ ಸೇವೆ ಬಂದ್ ಮಾಡಿ, ವೈದ್ಯರ ಪ್ರತಿಭಟನೆಗೆ ಬೆಂಬಲ ನೀಡಿದ್ದರಿಂದ ಆಸ್ಪತ್ರೆಯಲ್ಲಿ ರೋಗಿಗಳು ಪರದಾಡು ವಂತಾಯಿತು. ಒಪಿಡಿ ಸೇವೆ ಬಂದ್ ಮಾಡುವಂತೆ ಘೋಷಣೆ ಮಾಡಿದ್ದ ಐಎಂಎ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts