More

    ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಕ್ರಮಕೈಗೊಳ್ಳಿ

    ಕೂಡ್ಲಿಗಿ: ವಕೀಲನ ಮೇಲೆ ಹಲ್ಲೆ ಮಾಡಿದ ಪೋಲಿಸರ ವಿರುದ್ಧ ಕಾನೂನುಕ್ರಮ, ಚಿಕ್ಕಮಗಳೂರು ವಕೀಲರ ಸಂಘದ ಅಧ್ಯಕ್ಷ ಸೇರಿ ಇತರ 15 ಜನ ವಕೀಲರ ವಿರುದ್ಧ ದಾಖಲಿಸಿರುವ ಸುಳ್ಳು ಕೇಸ್ ಹಿಂಪಡೆಯಬೇಕು ಎಂದು ಒತ್ತಾಯಿಸಿ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎಂ.ರೇಣುಕಾಗೆ ಮನವಿ ಸಲ್ಲಿಸಿದರು.

    ಇದನ್ನು ಓದಿ: ಒಂದು ರೂಪಾಯಿ ಕೊಟ್ರೆ ಸಾಕು… ವಕೀಲರು, ಸರ್ಕಾರಿ ನೌಕರರಿಗೆ ಇಲ್ಲಿ ಸಿಗಲಿದೆ ಮನೆ! ಏನಿದು ಯೋಜನೆ?

    ಸಂಘದ ಅಧ್ಯಕ್ಷ ಜಿ.ಎಂ.ಮಲ್ಲಿಕಾರ್ಜುನಯ್ಯ ಮಾತನಾಡಿ, ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಮ್ ಮೇಲೆ ಪೊಲೀಸ್ ಅಧಿಕಾರಿಗಳು ಅಮಾನವೀಯವಾಗಿ ವರ್ತಿಸಿ ಹಲ್ಲೆ ನಡೆಸಿದ್ದಾರೆ. ಕಾನೂನು ದುರುಪಯೋಗ ಪಡಿಸಿಕೊಂಡು ಎ್ಐಆರ್ ದಾಖಲಿಸಿದ ಪೋಲಿಸರು ನಿರಂಕುಶ ಅಧಿಕಾರ ಬಳಕೆ ಮಾಡಿದ್ದು, ಇದನ್ನು ಪ್ರಶ್ನಿಸಿದವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವ ಮೂಲಕ ಬೆದರಿಕೆ ಹಾಕಿದ್ದಾರೆ.

    ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಕೀಲರ ಹಿತ ಸಂರಕ್ಷಣಾ ಕಾಯ್ದೆಯನ್ನು ಸರ್ಕಾರ ಕೂಡಲೇ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ವಕೀಲರಾದ ವೀರೇಶ್ ಪಾಟೀಲ್, ಪ್ರಭು, ಎಚ್.ನಾಗರಾಜ, ಪರಸಪ್ಪ, ಕೆ.ಎಚ್.ಎಂ.ಶೈಲಜಾ, ಸಾವಿತ್ರಿಬಾಯಿ, ಮಲ್ಲಿಕಾರ್ಜುನ ಇತರರಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts