More

  ನಿಗಮ ಅಧ್ಯಕ್ಷ ಸ್ಥಾನದಿಂದ ಅಭಿವೃದ್ಧಿಗೆ ಸಹಕಾರಿ

  ಎನ್.ಆರ್.ಪುರ: ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ಸರ್ಕಾರ ನವೀಕರಿಸಬಹುದಾದ ಇಂಧನ ನಿಗಮ ಅಧ್ಯಕ್ಷ ಸ್ಥಾನ ನೀಡಿರುವುದರಿಂದ ಶೃಂಗೇರಿ ಕ್ಷೇತ್ರದ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಎಂದು ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ಶೆಟ್ಟಿ ತಿಳಿಸಿದರು.

  ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ನಿಗಮ ಅಧ್ಯಕ್ಷ ಸ್ಥಾನ ನೀಡಿರುವುದರ ಹಿನ್ನೆಲೆಯಲ್ಲಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಮಾತನಾಡಿ, ಟಿ.ಡಿ.ರಾಜೇಗೌಡ ಎರಡು ಬಾರಿ ಶಾಸಕರಾಗಿದ್ದರಿಂದ ಅವರನ್ನು ಮಂತ್ರಿಯನ್ನಾಗಿ ಮಾಡಬೇಕು ಎಂದು ಒತ್ತಾಯ ಮಾಡಲಾಗಿತ್ತು. ಆದರೆ ತಡವಾಗಿಯಾದರೂ ನಿಗಮ ಅಧ್ಯಕ್ಷ ಸ್ಥಾನ ನೀಡಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ತೃಪ್ತಿ ತಂದಿದೆ. ಚುನಾವಣೆಯಲ್ಲಿ ಗೆಲ್ಲಲು ಶ್ರಮಿಸಿದ ಕಾರ್ಯಕರ್ತರಿಗೆ ಪ್ರತಿಲ ಸಿಕ್ಕಿದಂತಾಗಿದೆ ಎಂದರು.
  ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಬಿಳಾಲುಮನೆ ಉಪೇಂದ್ರ, ಪಪಂ ಸದಸ್ಯ ಸೈಯದ್‌ವಸೀಂ, ಯುವ ಕಾಂಗ್ರೆಸ್ ಘಟಕದ ತಾಲೂಕು ಅಧ್ಯಕ್ಷ ದೇವಂತ್‌ರಾಜ್ ಗೌಡ, ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಶ್ರೀಧರ್, ಕೆಡಿಪಿ ಸದಸ್ಯ ಮಾಳೂರುದಿಣ್ಣೆ ರಮೇಶ್, ಎಪಿಎಂಸಿ ನಿರ್ದೇಶಕ ಶಿವಣ್ಣ, ಬಗರ್‌ಹುಕುಂ ಸಮಿತಿ ಅಧ್ಯಕ್ಷ ಇ.ಸಿ.ಜೋಯಿ, ಮುಖಂಡರಾದ ರಾಬರ್ಟ್, ಕಳ್ಳಿಕೊಪ್ಪ ಮಣಿ, ಇರ್ಮಾನ್, ಶಿಬು ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts