ಮಂಡ್ಯ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್(ಭಾರತ) ಜಿಲ್ಲಾ ಶಾಖೆಯ ವತಿಯಿಂದ ಮೊದಲ ಬಾರಿಗೆ ನ.8ರಿಂದ 10ರವರೆಗೆ ನಗರದ ರೈತ ಸಭಾಂಗಣದ ಆವರಣದಲ್ಲಿ ಬಿಲ್ಡ್ 360 ಎಕ್ಸ್‌ಪೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ನವೀನ್ ತಿಳಿಸಿದರು.
ನಿರ್ಮಾಣ ಕ್ಷೇತ್ರದಲ್ಲಿನ ಬದಲಾವಣೆಗಳು, ಹೊಸ ಹೊಸ ತಂತ್ರಜ್ಞಾನವನ್ನು ಮನೆ, ಕಟ್ಟಡ ಮಾಲೀಕರು, ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು(ಎಐ) ಹಾಗೂ ಕಾರ್ಮಿಕರಿಗೆ ಪರಿಚಯಿಸುವುದು ಎಕ್ಸ್‌ಪೋ ಉದ್ದೇಶವಾಗಿದೆ. ನಿರ್ಮಾಣ ಕ್ಷೇತ್ರಕ್ಕೆ ಪೂರಕವಾದ ಉತ್ಪನ್ನಗಳನ್ನು ಉತ್ಪಾದಿಸುತ್ತಿರುವ 30ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಒಂದೇ ಸೂರಿನಡಿ ಕಟ್ಟಡಕ್ಕೆ ಸಂಬಂಧಿಸಿದಂತೆ ಎಲ್ಲ ಮಾಹಿತಿಗಳನ್ನು ಪಡೆಯಬಹುದಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಟ್ಟಡ ನಿರ್ಮಾಣ ಸಂಸ್ಥೆಗಳು ಹಾಗೂ ಕಟ್ಟಡ ನಿರ್ಮಾಣಕ್ಕಾಗಿ ಸಾಲ ನೀಡುವ ವಿವಿಧ ರಾಷ್ಟ್ರೀಕೃತ ಬ್ಯಾಂಕುಗಳು ಪಾಲ್ಗೊಳ್ಳಲಿದೆ. ಇದಲ್ಲದೆ ಇಂಟೀರಿಯಲ್ ಡಿಸೈನ್ ಬಗ್ಗೆ ತಿಳಿದುಕೊಳ್ಳಲು ಸಹಕಾರಿಯಾಗುತ್ತದೆ. ಹಲವರು 10, 20 ವರ್ಷದ ಹಳೇ ಕಟ್ಟಡವನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗುತ್ತಾರೆ. ಆದರೆ, ಹಳೇ ಕಟ್ಟಡವನ್ನೇ ಉಳಿಸಿಕೊಂಡು ಅತ್ಯಾಧುನಿಕತೆಯಿಂದ ನವೀಕರಣ ಮಾಡಬಹುದಾಗಿದೆ. ಈ ಬಗ್ಗೆಯೂ ಮಾಹಿತಿ ಪಡೆದುಕೊಳ್ಳಬಹುದಾಗಿದೆ. 8ರಂದು ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಶಾಸಕ ರವಿಕುಮಾರ್ ಗಣಿಗ, ಬಿಐಟಿ ಅಧ್ಯಕ್ಷ ಅಶೋಕ್ ಎಸ್.ಡಿ.ಜಯರಾಂ, ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಅತಿಥಿಗಳಾಗಿ ಭಾಗವಹಿಸುವರು ಎಂದು ವಿವರಿಸಿದರು.
ಖಜಾಂಚಿ ಮಯೂರಗೌಡ, ವ್ಯವಸ್ಥಾಪಕ ಸಮಿತಿ ಸದಸ್ಯ ಪರೀಕ್ಷಿತ್ ರಾಘವ್, ಕಿರಣ್‌ಕುಮಾರ್, ಸಿದ್ದಯ್ಯ, ದಿನೇಶ್ ಇದ್ದರು.
ನ.8ರಿಂದ 10ರವರೆಗೆ ಬಿಲ್ಡ್ 360 ಎಕ್ಸ್‌ಪೋ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಜಿಲ್ಲಾಧ್ಯಕ್ಷ ನವೀನ್ ಮಾಹಿತಿ
You Might Also Like
Spirituality: ಇರುವೆಗಳಿಗೆ ಆಹಾರ ನೀಡಿದರೆ ಶನಿದೇವನ ಪ್ರಭಾವ ಇರುವುದಿಲ್ಲವೇ?
Spirituality: ನಮ್ಮಲ್ಲಿರುವ ವಸ್ತು ಅಥವಾ ಯಾವುದೇ ಪದಾರ್ಥವನ್ನು ಇಲ್ಲದವರಿಗೆ ದಾನ ಮಾಡಿದರೆ ದೇವರ ಅನುಗ್ರಹ ಸದಾ…
2025ರಲ್ಲಿ ಸಾಲದ ಸುಳಿಗೆ ಸಿಲುಕಲಿದ್ದಾರಂತೆ ಈ 3 ರಾಶಿಯವರು!? ಹಣಕಾಸಿನ ವಿಚಾರದಲ್ಲಿ ಬಹಳ ಎಚ್ಚರ | Money
Money : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…
30 ನೇ ವಯಸ್ಸಿನಲ್ಲಿಯೇ ಕೂದಲು ಬಿಳಿ ಬಣ್ಣಕ್ಕೆ ತಿರುಗುತ್ತಿದೆಯೇ? White Hair ಆಗಿದ್ರೆ ಇಲ್ಲಿದೆ ಉಪಯುಕ್ತ ಮಾಹಿತಿ
White Hair : ಇಂದಿನ ಕಾಲದಲ್ಲಿ ಜನರ ಕೂದಲು ಚಿಕ್ಕ ವಯಸ್ಸಿನಲ್ಲೇ ಬೆಳ್ಳಗಾಗುತ್ತಿದೆ. ಇನ್ನು ಕೆಲವರು…