

ಮಂಡ್ಯ: ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಜ.6ರಂದು ಅಂಗವಿಕಲರ ಹಾಗೂ ಪಾಲಕರ 3ನೇ ರಾಜ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ರಾಜ್ಯಾಧ್ಯಕ್ಷ ಜಿ.ಎನ್.ನಾಗರಾಜು ತಿಳಿಸಿದರು.
ಅಂದು ಬೆಳಗ್ಗೆ 10ಗಂಟೆಗೆ ಸಿಲ್ವರ್ ಜ್ಯೂಬಿಲಿ ಉದ್ಯಾನದಲ್ಲಿ ಸಮ್ಮೇಳನ ರ್ಯಾಲಿಗೆ ಚಾಲನೆ ನೀಡಲಾಗುವುದು. 11.30ಕ್ಕೆ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಉದ್ಘಾಟಿಸುವರು. ಒಕ್ಕೂಟದ ಅಧ್ಯಕ್ಷ ಜಿ.ಎನ್.ನಾಗರಾಜ್ ಪ್ರಾಸ್ತಾವಿಕ ಭಾಷಣ ಮಾಡಲಿದ್ದು, ಅಂಗವಿಕಲರ ಹಕ್ಕುಗಳ ರಾಷ್ಟ್ರೀಯ ವೇದಿಕೆ ಕಾರ್ಯಾಧ್ಯಕ್ಷ ನಂಬುರಾಜನ್ ದಿಕ್ಸೂಚಿ ಭಾಷಣ ಮಾಡುವರು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮುಖ್ಯ ಅತಿಥಿಗಳಾಗಿ ಜಿ.ಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ಎಸ್ಪಿ ಎನ್.ಯತೀಶ್, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ, ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಅಧ್ಯಕ್ಷ ಎಂ.ಪುಟ್ಟಮಾದು, ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಟಿ.ಎಲ್.ಕೃಷ್ಣೇಗೌಡ, ಎನ್ಪಿಆರ್ಡಿ ಕಾರ್ಯಕಾರಿ ಸದಸ್ಯರಾದ ರಾಜನ್, ಮಂಜುನಾಥ ಹೆಬ್ಬಾರ್ ಭಾಗವಹಿಸುವರು ಎಂದು ವಿವರಿಸಿದರು.
ಸ್ವಾಗತ ಸಮಿತಿ ಅಧ್ಯಕ್ಷ ನಾಗರಾಜು, ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಜಿ.ಎನ್.ಯಶಸ್ವಿ, ದೊಡ್ಡಮರೀಗೌಡ, ಮಲ್ಲೇಶ, ಪೂರ್ಣಿಮಾ ಉಪಸ್ಥಿತರಿದ್ದರು.