Astrology: ಜ್ಯೋತಿಷ್ಯದಲ್ಲಿ, ಸೂರ್ಯನನ್ನು ಪ್ರಭಾವಶಾಲಿ ಗ್ರಹವೆಂದು ಕರೆಯಲಾಗುತ್ತದೆ. ಸೂರ್ಯನನ್ನು ಗ್ರಹಗಳ ರಾಜ ಎಂದು ಪರಿಗಣಿಸಲಾಗುತ್ತದೆ. ಆದರೆ ಕೇತುವನ್ನು ನಿಗೂಢ ಗ್ರಹ ಅಥವಾ ಪಾಪ ಗ್ರಹ ಎಂದು ಪರಿಗಣಿಸಲಾಗುತ್ತದೆ. ಕೇತು ಯಾವಾಗಲೂ ಅಶುಭ ಫಲಿತಾಂಶವನ್ನು ನೀಡುವುದಿಲ್ಲ. ಮಾರ್ಚ್ 15 ರಂದು ಸೂರ್ಯನು ಮೀನ ರಾಶಿಗೆ ಸಂಚಾರ ನಡೆಸುತ್ತಾನೆ. ಈ ವೇಳೆ ಸಂಸಪ್ತಕ ಯೋಗವನ್ನು ಸಹ ಸೃಷ್ಟಿಸುತ್ತಾನೆ.
ಜ್ಯೋತಿಷಿಗಳ ಪ್ರಕಾರ, ಸೂರ್ಯ ಮತ್ತು ಕೇತು ಸಂಸಪ್ತ ಯೋಗವನ್ನು ರೂಪಿಸುವುದರಿಂದ ಕೆಲವು ರಾಶಿಚಕ್ರಗಳಲ್ಲಿ ಶುಭ ಫಲಿತಾಂಶಗಳು ಕಂಡುಬರುತ್ತದೆ ಎಂದು ಹೇಳಲಾಗುತ್ತದೆ. ಹಾಗಿದ್ದರೆ, ಆ ರಾಶಿಗಳು ಯಾರು ಎಂದು ನೋಡೋಣ ಬನ್ನಿ...
ಕುಂಭ ರಾಶಿ
ಕುಂಭ ರಾಶಿಯವರಿಗೆ ಕೇತು ಮತ್ತು ಸೂರ್ಯನ ಈ ಸಂಸಪ್ತ ಯೋಗವು ತುಂಬಾ ಪ್ರಯೋಜನಕಾರಿಯಾಗಲಿದೆ. ನೀವು ಹಳೆಯ ಬಾಕಿ ಇರುವ ಕೆಲಸಗಳನ್ನು ಈ ಸಮಯದಲ್ಲಿ ಮಾಡಿ ಮುಗಿಸಲಿದ್ದೀರಿ. ಈ ಜನರು ಹೊಸ ಸ್ನೇಹಿತರನ್ನು ಸಂಪಾದಿಸಲಿದ್ದೀರಿ. ವೃತ್ತಿಜೀವನದ ವಿಷಯದಲ್ಲಿ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಕೆಲಸದಲ್ಲಿ ಸಂಬಳ ಹೆಚ್ಚಾಗುವ ನಿರೀಕ್ಷೆ ಇದೆ. ಹೊಸ ಆದಾಯದ ಮೂಲಗಳು ತೆರೆದುಕೊಳ್ಳುತ್ತವೆ.
ತುಲಾ ರಾಶಿ
ಈ ರಾಶಿಚಕ್ರದ ಜನರಿಗೆ ಈ ಯೋಗವು ಪ್ರಯೋಜನಕಾರಿಯಾಗಲಿದೆ. ಈ ಸಮಯದಲ್ಲಿ ಅನಗತ್ಯ ಖರ್ಚುಗಳನ್ನು ತೊಡೆದುಹಾಕಲು ಸಾಧ್ಯವಾಗುತ್ತದೆ. ಹೊಸ ಆದಾಯದ ಮೂಲಗಳು ತೆರೆದುಕೊಳ್ಳಬಹುದು. ಈ ರಾಶಿಚಕ್ರದವರು ಅನೇಕ ಆಸೆಗಳನ್ನು ಈಡೇರಿಸಿಕೊಳ್ಳಲು ಸಾದ್ಯವಾಗುತ್ತದೆ. ವ್ಯವಹಾರದಲ್ಲಿ ಉತ್ತಮ ಲಾಭವನ್ನು ಕಾಣಲಿದ್ದೀರಿ. ಕಚೇರಿಗಳಲ್ಲಿ ಸ್ಥಾನ ಮಾನ ಹೆಚ್ಚಾಗಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಸೂರ್ಯ ಮತ್ತು ಕೇತುವಿನ ಈ ಸಂಯೋಗವು ಪ್ರಯೋಜನಕಾರಿಯಾಗಲಿದೆ. ಈ ರಾಶಿಚಕ್ರ ಚಿಹ್ನೆಗಳಿಗೆ ಕೆಲಸದ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತವೆ. ಕೆಲಸ ಮಾಡುವವರು ತಮ್ಮ ಕಠಿಣ ಪರಿಶ್ರಮದಿಂದ ಫಲಿತಾಂಶಗಳನ್ನು ಪಡೆಯಲಿದ್ದಾರೆ. ಕೆಲಸದಲ್ಲಿ ಸ್ಥಾನಮಾನಗಳು ಹೆಚ್ಚಾಗಲಿದ್ದು, ಬಡ್ತಿಯ ಜೊತೆ ಸಂಬಳ ಹೆಚ್ಚಾಗಲಿದೆ (ಏಜೆನ್ಸೀಸ್).
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್ಸೈಟ್ ಜವಾಬ್ದಾರರಾಗಿರುವುದಿಲ್ಲ.