ಈ 3 ನಕ್ಷತ್ರಗಳಲ್ಲಿ ಜನಿಸಿದವರು ಹೆಚ್ಚು ಸತ್ಯವನ್ನೇ ಮಾತನಾಡುತ್ತಾರಂತೆ: ಇವರಿಗೆ ಸುಳ್ಳಂದ್ರೆ ಆಗುವುದೇ ಇಲ್ಲ! Birth Stars
ಈ 3 ನಕ್ಷತ್ರಗಳಲ್ಲಿ ಜನಿಸಿದವರು ಹೆಚ್ಚು ಸತ್ಯವನ್ನೇ ಮಾತನಾಡುತ್ತಾರಂತೆ: ಇವರಿಗೆ ಸುಳ್ಳಂದ್ರೆ ಆಗುವುದೇ ಇಲ್ಲ! Birth Stars
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಜನ್ಮ ನಕ್ಷತ್ರದ ಆಧಾರದ ಮೇಲೆ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವ ನಿರ್ಧಾರವಾಗುತ್ತದೆ
ಗ್ರಹಗಳ ಚಲನೆಯಿಂದಾಗಿ ನಕ್ಷತ್ರಗಳ ಪ್ರಭಾವದಲ್ಲಿ ಬದಲಾವಣೆ ಉಂಟಾಗುತ್ತದೆ
ಕೃತಿಕಾ ನಕ್ಷತ್ರದಲ್ಲಿ ಜನಿಸಿದವರು ಯಾವುದೇ ಸಂದರ್ಭದಲ್ಲೂ ಸತ್ಯ ಮಾತನಾಡಲು ದೃಢನಿಶ್ಚಯ ಹೊಂದಿರುತ್ತಾರೆ
ಪೂರ್ವ ಫಲ್ಗುಣಿ ನಕ್ಷತ್ರದವರು ಸತ್ಯದಿಂದ ಬದುಕು ವುದನ್ನೇ ತಮ್ಮ ಜೀವನದ ಮುಖ್ಯ ಉದ್ದೇಶವಾಗಿಸಿಕೊಂಡಿರುತ್ತಾರೆ
ಚಿತ್ರಾ ನಕ್ಷತ್ರದಲ್ಲಿ ಜನಿಸಿದವರ ತತ್ವಗಳ ಪಟ್ಟಿಯಲ್ಲಿ ಸತ್ಯ ಮಾತನಾಡುವುದಕ್ಕೆ ಮೊದಲ ಆದ್ಯತೆ ಇರುತ್ತದೆ
Birth Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ. ಹಿಂದು ಧರ್ಮದಲ್ಲಿ ಈ ಜನ್ಮ ದಿನಾಂಕ ಮತ್ತು ಹುಟ್ಟಿದ ಗಳಿಗೆಯು ವ್ಯಕ್ತಿಯ ಜೀವನದ ಮೇಲೆ ಬಹಳ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ. ಹುಟ್ಟಿದ ದಿನ ಮತ್ತು ಗಳಿಗೆಯ ಆಧಾರದ ಮೇಲೆ ವ್ಯಕ್ತಿಯ ರಾಶಿ ಮತ್ತು ನಕ್ಷತ್ರಗಳನ್ನು ನಿರ್ಧರಿಸಲಾಗುತ್ತದೆ. ಜ್ಯೋತಿಷ್ಯದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ರಾಶಿಚಕ್ರ ಚಿಹ್ನೆ ಮತ್ತು ನಕ್ಷತ್ರವು ಆತನ ಭವಿಷ್ಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ.
ಅಂದಹಾಗೆ ಒಬ್ಬ ವ್ಯಕ್ತಿಯ ಗುಣ, ನಡತೆ, ವರ್ತನೆ ಹಾಗೂ ಆತನ ಆಗು ಹೋಗುಗಳ ಹಿಂದೆ ಜನ್ಮ ನಕ್ಷತ್ರಗಳು ಕಾರಣವಾಗಿರುತ್ತದೆ. ಜನ್ಮ ನಕ್ಷತ್ರದ ಪ್ರಕಾರವಾಗಿ ಜೀವನದಲ್ಲಿ ಏನು ನಡೆಯಬೇಕೋ ಅದು ನಡದೇ ನಡೆಯುತ್ತದೆ ಎಂದು ಹಿರಿಯರು ಹೇಳುತ್ತಿರುತ್ತಾರೆ.
ನಿಮ್ಮ ಜನ್ಮ ನಕ್ಷತ್ರದ ಪ್ರಕಾರ ನಿಮ್ಮ ವ್ಯಕ್ತಿತ್ವ ಮತ್ತು ಭವಿಷ್ಯವನ್ನು ತಿಳಿದುಕೊಳ್ಳಬಹುದು. ಈ ಜನ್ಮ ನಕ್ಷತ್ರಗಳು ಪ್ರಭಾವ ಒಂದೇ ರೀತಿ ಇರುವುದಿಲ್ಲ. ಗ್ರಹಗಳ ಚಲನೆಯಿಂದಾಗಿ ಅವುಗಳ ಪ್ರಭಾವವೂ ಕೂಡ ಬದಲಾಗುತ್ತಿರುತ್ತದೆ. ಒಂದು ಸಮಯದಲ್ಲಿ ನೋವು ಅನುಭವಿಸಿದ್ದರೆ, ಇನ್ನೊಂದು ಸಮಯದಲ್ಲಿ ಸಂತೋಷದ ಕ್ಷಣಗಳನ್ನು ಅನುಭವಿಸುತ್ತೀರಿ.
ಅದೇ ರೀತಿ ಕೆಲವು ನಕ್ಷತ್ರಗಳಲ್ಲಿ ಜನಿಸಿದ ಜನರು ಸ್ವಾಭಾವಿಕವಾಗಿಯೇ ಪ್ರಾಮಾಣಿಕ ಜೀವನವನ್ನು ನಡೆಸಲು ಮತ್ತು ಕಷ್ಟಕರ ಸಂದರ್ಭಗಳಲ್ಲಿಯೂ ಸತ್ಯವನ್ನು ಮಾತನಾಡಲು ಹೆಚ್ಚು ಬಯಸುತ್ತಾರೆ. ಹಾಗಾದರೆ, ಯಾವ ನಕ್ಷತ್ರಗಳಲ್ಲಿ ಹುಟ್ಟಿದವರು ಸುಳ್ಳನ್ನು ತುಂಬಾ ನಿರ್ಲಕ್ಷಿಸುತ್ತಾರೆ ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.
ಕೃತಿಕಾ ನಕ್ಷತ್ರ
ಈ ನಕ್ಷತ್ರದಲ್ಲಿ ಜನಿಸಿದ ಜನರು ತುಂಬಾ ಮುಕ್ತರು ಮತ್ತು ಪ್ರಾಮಾಣಿಕತೆಯನ್ನು ಗೌರವಿಸುತ್ತಾರೆ. ಯಾವುದೇ ಸಂದರ್ಭದಲ್ಲೂ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಹಿಂಜರಿಯುವುದಿಲ್ಲ. ಅಪಾಯಕಾರಿ ಸಂದರ್ಭಗಳಲ್ಲಿಯೂ ಸಹ ಸತ್ಯವನ್ನು ಮಾತ್ರ ಮಾತನಾಡಲು ದೃಢನಿಶ್ಚಯ ಹೊಂದಿರುತ್ತಾರೆ.
ಈ ನಕ್ಷತ್ರದಲ್ಲಿ ಜನಿಸಿದ ಜನರು ಬಹಳಷ್ಟು ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ. ಅವರ ಪ್ರಾಮಾಣಿಕತೆಯು ಅವರ ಸ್ವಾಭಿಮಾನ ಮತ್ತು ಆತ್ಮವಿಶ್ವಾಸದ ಪ್ರಜ್ಞೆಗೆ ನಿಕಟ ಸಂಬಂಧವನ್ನು ಹೊಂದಿರುತ್ತದೆ. ಅವರು ಜೀವನದ ಮುಖ್ಯ ಉದ್ದೇಶ ಸತ್ಯದಿಂದ ಬದುಕುವುದೇ ಆಗಿದೆ. ಹೀಗಾಗಿ ಈ ನಕ್ಷತ್ರದಲ್ಲಿ ಜನಿಸಿದವರು ಹೆಚ್ಚೆಚ್ಚು ಸತ್ಯವನ್ನೇ ಮಾತನಾಡುತ್ತಾರೆ.
ಚಿತ್ರಾ ನಕ್ಷತ್ರ
ಚಿತ್ರಾ ನಕ್ಷತ್ರದಲ್ಲಿ ಜನಿಸಿದವರು ತಾವು ಮಾಡುವ ಎಲ್ಲದರಲ್ಲೂ ಪರಿಪೂರ್ಣತೆ ಮತ್ತು ಪ್ರಾಮಾಣಿಕತೆಯ ನಿರೀಕ್ಷೆಯನ್ನು ಹೊಂದಿರುತ್ತಾರೆ. ಅವರು ಸ್ಪಷ್ಟ ಮತ್ತು ಎಲ್ಲರಿಗೂ ಅರ್ಥವಾಗುವ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಅವರು ತತ್ವಗಳನ್ನು ಅನುಸರಿಸುವಲ್ಲಿ ನಿಪುಣರಾಗಿರುತ್ತಾರೆ. ಅವರ ತತ್ವಗಳ ಪಟ್ಟಿಯಲ್ಲಿ ಖಂಡಿತವಾಗಿಯೂ ಸತ್ಯ ಮಾತನಾಡುವುದಕ್ಕೆ ಮೊದಲ ಆದ್ಯತೆ ಆಗಿರುತ್ತದೆ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ ವಿಜಯವಾಣಿ ಡಾಟ್ ನೆಟ್ ಸೈಟ್ ಜವಾಬ್ದಾರರಾಗಿರುವುದಿಲ್ಲ.